ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಪ್ರ.ಕಾರ್ಯದರ್ಶಿಯಾಗಿ ಕೆ. ಎಂ ಮುಸ್ತಫಾ ನೇಮಕ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಕೆ ಎಂ ಮುಸ್ತಫಾ ಜನತಾ ಸುಳ್ಯ ನೇಮಕಗೊಂಡಿದ್ದಾರೆ.

ಕೆ.ಪಿ.ಸಿ.ಸಿ. ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್‌ರವರು ರಾಷ್ಟ್ರೀಯ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಹಾಗೂ ಸಂಸದ ಇಮ್ರಾನ್ ಪ್ರತಾಪ್‌ಗಡಿ ಅವರ ಅನುಮೋದನೆಯೊಂದಿಗೆ ಈ ನೇಮಕಾತಿ ಆದೇಶ ನೀಡಿದ್ದಾರೆ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗ ಅಧ್ಯಕ್ಷ ಕೆ.ಕೆ. ಶಾಹುಲ್ ಹಮೀದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಳ್ಯ ನಗರ ಪಂಚಾಯತ್ ನ ಮಾಜಿ ಸದಸ್ಯರಾಗಿರುವ ಮುಸ್ತಫಾ ಜನತಾ ಅವರು ಜಿಲ್ಲಾ ಯೋಜನಾ ಸಮಿತಿ ಮಾಜಿ ಸದಸ್ಯರಾಗಿ, ದ.ಕ. ಮತ್ತು ಉಡುಪಿ ಜಿಲ್ಲೆ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಮುಸ್ತಫರನ್ನು ಅಲ್ಪಸಂಖ್ಯಾತರ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲು ವಿಧಾನಸಭೆ ವಿಪಕ್ಷ ಶಾಸಕಾಂಗ ಉಪನಾಯಕ ಯು.ಟಿ.ಖಾದರ್, ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಮುಖ್ಯ ಸಚೇತಕ ಐವನ್ ಡಿ’ಸೋಜಾ ಹಾಗೂ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ್ ಶಿಫಾರಸು ಮಾಡಿದ್ದಾರೆ ಎಂದು ತಿಳಿದು ಬಂದಿದೆ.