ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಬೂತ್ ಜೋಡೋ ಅಭಿಯಾನದ ಪೂರ್ವಭಾವಿ ಸಭೆ
ಪುತ್ತೂರು: ಮುಂಬರುವ ವಿಧಾನಸಭಾ ಚುನಾವಣೆ ಮತ್ತು ರಾಜ್ಯಾದ್ಯಂತ ಎಸ್‌ಡಿಪಿಐ ವತಿಯಿಂದ ಆಯೋಜಿಸಿರುವ ಬೂತ್ ಜೋಡೋ ಅಭಿಯಾನದ ಭಾಗವಾಗಿ ಎಸ್‌ಡಿಪಿಐ ಸುಳ್ಯ ವಿಧಾನಸಭಾ ಸಮಿತಿ ವತಿಯಿಂದ ಅಭಿಯಾನದ ಪೂರ್ವಭಾವಿ ಸಭೆ ಸವಣೂರಿನಲ್ಲಿ ನಡೆಯಿತು.

ಸುಳ್ಯ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರಾದ ಬಾಬು ಎನ್ ಸವಣೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಸಭೆಯಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸುಳ್ಯ ಕ್ಷೇತ್ರದಿಂದ ಸ್ಫರ್ಧಿಸುವ ವಿಚಾರದ ಬಗ್ಗೆ ಹಾಗೂ ಬೂತ್ ಜೋಡೋ ಅಭಿಯಾನವನ್ನು ಯಶಸ್ವಿಗೊಳಿಸುವ ಬಗ್ಗೆ ಚರ್ಚಿಸಲಾಯಿತು.
ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಪುತ್ತೂರು ಪ್ರಾಸ್ತಾವಿಕ ಮಾತುಗಳನ್ನಾಡಿ ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು.
ದ.ಕ ಜಿಲ್ಲಾ ಪ್ರ.ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು ಸಭೆಯ ವೀಕ್ಷಕರಾಗಿ ಆಗಮಿಸಿ ಸಲಹೆ ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ಎಸ್‌ಡಿಪಿಐ ದ.ಕ ಜಿಲ್ಲಾ ಪಕ್ಷ ಸಂಘಟನಾ ಕಾರ್ಯದರ್ಶಿ ಜಮಾಲ್ ಜೋಕಟ್ಟೆ, ಜಿಲ್ಲಾ ಸಮಿತಿ ಸದಸ್ಯ ಅಬೂಬಕ್ಕರ್ ಮದ್ದ, ಸುಳ್ಯ ವಿಧಾನಸಭಾ ಕಾರ್ಯದರ್ಶಿ ರಫೀಕ್ ಎಂ.ಎ, ಸಮಿತಿ ಸದಸ್ಯರಾದ ಅಬ್ದುಲ್ ಕಲಾಂ ಸುಳ್ಯ, ಮೀರಝ್ ಸುಳ್ಯ, ಅಶ್ರಫ್ ಟರ್ಲಿ ಸಂಪಾಜೆ, ಸೆಲೀಂ ಸುಳ್ಯ, ಶರೀಫ್ ನಿಂತಿಕಲ್, ಹಮೀದ್ ಮರಕ್ಕಡ, ಅಬ್ದುಲ್ ರಹ್ಮಾನ್ ಬೆಳ್ಳಾರೆ, ಯೂಸುಫ್ ಹಾಜಿ ಬೇರಿಕೆ, ಬಶೀರ್ ಆತೂರು, ಇಸ್ಮಾಯಿಲ್ ಕಡಬ, ಅಬ್ದುಲ್ ರಝಾಕ್ ಕೆನರ ಸವಣೂರು ಸೇರಿದಂತೆ ಬ್ಲಾಕ್ ಸಮಿತಿ ಹಾಗೂ ಗ್ರಾಮ ಸಮಿತಿಯ ಹಲವಾರು ಪದಾಧಿಕಾರಿಗಳು ಉಪಸ್ಥಿತರಿದ್ದರು.