ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪದಾಧಿಕಾರಿಗಳಾಗಿ ಸುಳ್ಯದ ಮೂವರ ನೇಮಕ
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪದಾಧಿಕಾರಿಗಳ ನೇಮಕ ಜಿಲ್ಲಾ ಉಪಾಧ್ಯಕ್ಷರಾಗಿ ನೇಮಕಗೊಳಿಸಿ ಎಚ್.ಎ.ಉಮ್ಮರ್ ಹಾಜಿ ಜಯನಗರ, ಎಂ.ಕೆ.ಇಬ್ರಾಹಿಂ ಸಂಪಾಜೆ ಹಾಗೂ ಜಿಲ್ಲಾ ಸಂಯೋಜಕರಾಗಿ ಬಶೀರ್ ಅಹ್ಮದ್.ಎನ್. ನೇಲ್ಯಮಜಲು ಇವರಿಗೆ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಕೆ.ಕೆ.ಶಾಹುಲ್ ಹಮೀದ್ ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಆದೇಶ ಪತ್ರವನ್ನು ಹಸ್ತಾಂತರಿಸಿದರು.
ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಕುಂಞ ಗೂನಡ್ಕ, ಜಿಲ್ಲಾ ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದ ಉಸ್ತುವಾರಿ ಶಬ್ಬೀರ್ ಸಿದ್ದಕಟ್ಟೆ, ಜಿಲ್ಲಾ ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿ ಅಲ್ವಿನ್ ಪ್ರಕಾಶ್ ಹಾಗೂ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಕೋಶಾಧಿಕಾರಿ ತಾಜ್ ಮಹಮ್ಮದ್ ಸಂಪಾಜೆ ಉಪಸ್ಥಿತರಿದ್ದರು.
ಮಾಜಿ ಸಚಿವರುಗಳಾದ ಬಿ.ರಮಾನಾಥ ರೈ, ಯು.ಟಿ.ಖಾದರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಹರೀಶ್ ಕುಮಾರ್, ಕೆ.ಪಿ.ಸಿ.ಸಿ.ಉಪಾಧ್ಯಕ್ಷರಾದ ಐವನ್ ಡಿ’ಸೋಜಾ, ಕೆ.ಪಿ.ಸಿ.ಸಿ.ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಸಿ.ಜಯರಾಮ, ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷರಾದ ಎಸ್.ಸಂಶುದ್ದೀನ್, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಇಸ್ಮಾಯಿಲ್ ಪಡ್ಪಿನಂಗಡಿ, ವಲಯ ಅಧ್ಯಕ್ಷ ರಾದ ಅನಿಲ್ ರೈ ಬೆಳ್ಳಾರೆ , ಮಾಜಿ ತಾಲೂಕ್ ಪಂಚಾಯತ್ ಸದಸ್ಯರಾದ ಅಬ್ದುಲ್ ಗಫೂರ್ ಇವರ ಶಿಫಾರಸ್ಸಿನ ಮೇರೆಗೆ ಈ ನೇಮಕಾತಿ ನಡೆದಿದೆ.