ಸುಳ್ಯ ಬ್ಲಾಕ್ ಕಾಂಗ್ರೆಸ್ ನಿಯೋಗದಿಂದ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಭೇಟಿ
5 ಜಿಲ್ಲೆಗಳ ಜಿಲ್ಲಾ,ಬ್ಲಾಕ್ ಪದಾಧಿಕಾರಿಗಳನ್ನು ಭೇಟಿಯಾಗಳು ಮಂಗಳೂರಿಗೆ ಆಗಮಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕರ್ನಾಟಕ ಉಸ್ತುವಾರಿ, ರಾಜ್ಯಸಭಾ ಸದಸ್ಯ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಸುಳ್ಯ ಕಾಂಗ್ರೆಸ್ ನಿಯೋಗ ಭೇಟಿ ಮಾಡಿ ಪ್ರಸಕ್ತ ರಾಜಕೀಯ ವಿದ್ಯಾಮಾನಗಳ ಬಗ್ಗೆ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ ವಿರೋಧಪಕ್ಷದ ನಾಯಕ ಬಿಕೆ ಹರಿಪ್ರಸಾದ್, ವಿಧಾನಸಭೆ ವಿಪಕ್ಷ ಉಪನಾಯಕ ಯು ಟಿ ಖಾದರ್, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ ಸಿ ಜಯರಾಮ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ಕೆಪಿಸಿಸಿ ಮಾಧ್ಯಮ ವಕ್ತಾರ ಟಿ. ಎಂ. ಶಹೀದ್, ಕೆಪಿಸಿಸಿ ಸಂಯೋಜಕ ಎಂ.ವೆಂಕಪ್ಪ ಗೌಡ, ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ಪ್ರಧಾನ ಕಾರ್ಯದರ್ಶಿ ಕೆ ಎಂ ಮುಸ್ತಫ, ಕೆಪಿಸಿಸಿ ಸಂಯೋಜಕರಾದ ಕೃಷ್ಣಪ್ಪ, ಎಚ್ ಎಂ ನಂದಕುಮಾರ್, ಡಾ.ರಘು, ಪ್ರಮುಖರಾದ ಪ್ರಹ್ಲಾದ್ ಮೊದಲಾದವರು ಉಪಸ್ಥಿತರಿದ್ದರು.