ಜೈಲಿನಲ್ಲಿರುವ ಸ್ಯಾಂಟ್ರೋ ರವಿ ಆತ್ಮಹತ್ಯೆಗೆ ಯತ್ನ..?- ಕಾಂಗ್ರೆಸ್
ಪರಿಶಿಷ್ಟ ಸಮುದಾಯದ ಮಹಿಳೆಯನ್ನು ವಂಚಿಸಿ, ಜಾತಿ ನಿಂದನೆ ಮಾಡಿ, ಹಲ್ಲೆ ನಡೆಸಿ, ವರದಕ್ಷಿಣೆ ಕಿರುಕುಳ ನೀಡಿದ ಆರೋಪದಲ್ಲಿ ಜೈಲಿನಲ್ಲಿರುವ ಸ್ಯಾಂಟ್ರೋ ರವಿ ಆತ್ಮಹತ್ಯೆಗೆ ಯತ್ನಿಸಿದ್ದು, ಬಿಜೆಪಿ ಸತ್ಯಗಳನ್ನು ಸಮಾಧಿ ಮಾಡಲು ಹೊರಟಿದೆಯೇ ಎಂದು ಕರ್ನಾಟಕ ಕಾಂಗ್ರೆಸ್ ಟೀಕಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಸ್ಯಾಂಟ್ರೋ ರವಿಯೊಳಗೆ ಅಡಗಿದ್ದ ಬಿಜೆಪಿಗರ ಭಯಂಕರ ಸತ್ಯಗಳನ್ನು ಸಮಾಧಿ ಮಾಡಲು ಹೊರಟಿದೆಯೇ ಸರ್ಕಾರ? ಸಿಐಡಿ ಕಸ್ಟಡಿಯಲ್ಲಿರುವ ಸ್ಯಾಂಟ್ರೋ ರವಿ ಆತ್ಮಹತ್ಯೆಗೆ ಯತ್ನಿಸಿದ್ದಾನಂತೆ ಎಂದು ಬರೆದುಕೊಂಡಿದೆ.
ಇದು ಆತ್ಮಹತ್ಯೆ ಯತ್ನವೋ, ಕೊಲೆ ಯತ್ನವೋ? ಎಂದು ಪ್ರಶ್ನಿಸಿರುವ ಕಾಂಗ್ರೆಸ್, ಸ್ಯಾಂಟ್ರೋ ರವಿಯನ್ನು ಮುಗಿಸುವ ಮೂಲಕ ಸರ್ಕಾರದ ರಹಸ್ಯಗಳನ್ನೂ ಮುಗಿಸುವ ಹುನ್ನಾರ ನಡೆದಿದೆಯೇ ಮುಖ್ಯಮಂತ್ರಿ ಬೊಮ್ಮಾಯಿಯವರೇ ಎಂದು ಟೀಕಿಸಿದೆ.