ಕರಾವಳಿಕ್ರೈಂರಾಜ್ಯರಾಷ್ಟ್ರೀಯ

ಪ್ರವೀಣ್ ನೆಟ್ಟಾರು ಹಂತಕರು ಸೌದಿಯಲ್ಲಿ ಪತ್ತೆ; ವದಂತಿ



ಸುಳ್ಯ ತಾಲೂಕಿನ ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಅರೋಪಿಗಳು ಸೌದಿ ಅರೇಬಿಯಾದಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ಸುದ್ದಿ ಹಬ್ಬಿದೆ.

ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಎನ್ ಐಎ ಅಧಿಕಾರಿಗಳು ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಇನ್ನಿಬ್ಬರು ಪ್ರಮುಖ ಆರೋಪಿಗಳಿಗಾಗಿ ತೀವ್ರ ಹುಡುಕಾಟ ನಡೆಸಿದ್ದು ಈ ಮಧ್ಯೆ ತಲೆಮರೆಸಿಕೊಂಡಿರುವ ಇಬ್ಬರು ಪ್ರಮುಖ ಆರೋಪಿಗಳಾದ ಶರೀಫ್ ಹಾಗೂ ಕೆ.ಎ.ಮಸೂದ್ ಬಗ್ಗೆ ಸುಳಿವು ನೀಡಿದರೆ 10 ಲಕ್ಷ ನಗದು ಬಹುಮಾನ ನೀಡುವುದಾಗಿ ಎನ್ ಐ ಎ ಅಧಿಕಾರಿಗಳು ಇತ್ತೀಚೆಗೆ ಘೋಷಿಸಿದ್ದರು.

ಇದೀಗ ಇಬ್ಬರೂ ಆರೋಪಿಗಳು ಸೌದಿ ಅರೇಬಿಯಾದಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನುವ ವದಂತಿ ಹಬ್ಬಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ಗೊತ್ತಾಗಬೇಕಿದೆ.

Leave a Reply

Your email address will not be published. Required fields are marked *

error: Content is protected !!