ಧಾರವಾಡದಲ್ಲಿ ಅಮಿತ್ ಶಾ ರೋಡ್ ಶೋ: ಬೊಮ್ಮಾಯಿ, ಯಡಿಯೂರಪ್ಪ ಭಾಗಿ
ಬಿಜೆಪಿ ‘ವಿಜಯ ಸಂಕಲ್ಪ ಅಭಿಯಾನ’ದ ಅಂಗವಾಗಿ ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರೋಡ್ ಶೋ ನಡೆಸಿದ್ದಾರೆ.

ರೋಡ್ ಶೋಗೆ ಜನಸಾಗರವೇ ಹರಿದು ಬಂದಿದ್ದು, ಪೊಲೀಸರು ಭಾರೀ ಭದ್ರತೆ ಒದಗಿಸಿದ್ದಾರೆ.
ಅಮಿತ್ ಶಾ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪ್ರಲ್ಹಾದ ಜೋಶಿ ರೋಡ್ ಶೋನಲ್ಲಿ ಭಾಗವಹಿಸಿದ್ದಾರೆ.