ನಾಳೆ (ಜ.30) ಪುತ್ತೂರಿನಲ್ಲಿ ಜೆಡಿಎಸ್ ಪಕ್ಷದ ಕಚೇರಿ ಉದ್ಘಾಟನೆ, ಕಾರ್ಯಕರ್ತರ ಸಭೆ
ಪುತ್ತೂರು: ಕರ್ನಾಟಕ ಪ್ರದೇಶ ಜಾತ್ಯಾತೀತ ಜನತಾ ದಳ ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷದ ಕಚೇರಿ ಉದ್ಘಾಟನೆ ಹಾಗೂ ಕಾರ್ಯಕರ್ತರ ಸಭೆ ಜ.30ರಂದು ಪುತ್ತೂರು ಅಮರ್ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆಯಲಿದೆ.

ಜೆಡಿಎಸ್ ದ.ಕ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ಕಚೇರಿ ಉದ್ಘಾಟನೆ ನೆರವೇರಿಸಲಿದ್ದು ಕಾರ್ಯಕ್ರಮದಲ್ಲಿ ರಾಜ್ಯ, ಜಿಲ್ಲಾ ಮಟ್ಟದ ನಾಯಕರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಜೆಡಿಎಸ್ ಪಕ್ಷದ ಪದಾಧಿಕಾರಿಗಳು ಕಾರ್ಯಕರ್ತರು ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಎಂದು ಜೆಡಿಎಸ್ ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಅಶ್ರಫ್ ಕಲ್ಲೇಗ ತಿಳಿಸಿದ್ದಾರೆ.