ಫೆಬ್ರವರಿ 11: ಕೇಂದ್ರ ಗೃಹ ಸಚಿವ ಅಮಿತ್ ಶಾ ಪುತ್ತೂರಿಗೆ
ಕೇಂದ್ರ ಗೃಹ ಸಚಿವ, ಸಹಕಾರ ಸಚಿವರೂ ಆಗಿರುವ ಅಮಿತ್ ಶಾ ಅವರು ಫೆ.11ರಂದು ಪುತ್ತೂರಿಗೆ ಆಗಮಿಸಲಿದ್ದಾರೆ.
ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ.
ತೆಂಕಿಲ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಮೈದಾನದಲ್ಲಿ ಅಪರಾಹ್ನ 2ರಿಂದ 4.30ರ ತನಕ ಬೃಹತ್ ಸಮಾವೇಶ ನಡೆಯಲಿದ್ದು ಕ್ಯಾಂಪ್ಕೋ ಸುವರ್ಣ ಮಹೋತ್ಸವ ಪ್ರಯುಕ್ತ ವಿವಿಧ ಯೋಜನೆ ಮತ್ತು ಕಾರ್ಯಕ್ರಮಗಳಿಗೆ ಅಮಿತ್ ಶಾ ಚಾಲನೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.