ಸುಳ್ಯ: ದಕ್ಷ ಅಧಿಕಾರಿಯಾಗಿ ಜನಮೆಚ್ಚುಗೆ ಗಳಿಸಿದ್ದ ತಹಶೀಲ್ದಾರ್ ಕು.ಅನಿತಾಲಕ್ಷ್ಮಿ ವರ್ಗಾವಣೆ
ಕಳೆದ ಎರಡು ವರ್ಷಗಳಿಂದ ಸುಳ್ಯದಲ್ಲಿ ದಿಟ್ಟ, ದಕ್ಷ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ತಹಶೀಲ್ದಾರ್ ಕು. ಅನಿತಾ ಲಕ್ಷ್ಮಿ ಯವರು ಕುಂದಾಪುರ ತಾಲೂಕು ಕಚೇರಿಗೆ ತಹಶೀಲ್ದಾರರಾಗಿ ವರ್ಗಾವಣೆಗೊಂಡಿರುತ್ತಾರೆ.
ಮುಂಬರುವ ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ಚುನಾವಣಾ ಆಯೋಗದ ಸೂಚನೆಯನ್ವಯ ಕಂದಾಯ ಇಲಾಖೆಯ ತಹಶೀಲ್ದಾರ್ ಗಳ ವರ್ಗಾವಣೆಯಾಗಿದ್ದು ಸುಳ್ಯ ತಹಶೀಲ್ದಾರ್ ಅನಿತಾಲಕ್ಷ್ಮೀ ಯವರನ್ನು ವರ್ಗಾವಣೆ ಮಾಡಲಾಗಿದೆ.
ಕಳೆದ ಎರಡು ವರ್ಷಗಳ ಹಿಂದೆ ಮೂಡಬಿದ್ರೆಯಿಂದ ಸುಳ್ಯಕ್ಕೆ ವರ್ಗಾವಣೆಗೊಂಡು ಬಂದ ಅವರು ಕೋವಿಡ್ ಸಂದರ್ಭದಲ್ಲಿ ತಾಲೂಕಿನಾಧ್ಯಂತ ಸಂಬಂಧಿಸಿದ ಅಧಿಕಾರಿಗಳ ತಂಡವನ್ನು ಕಟ್ಟಿಕೊಂಡು ಕೋವಿಡ್ ವಿರುದ್ಧದ ಸಮರದಲ್ಲಿ ಸಂಪೂರ್ಣವಾಗಿ ತೊಡಗಿಕೊಂಡಿದ್ದರು.
ಅಲ್ಲದೆ ಕಳೆದ ಎರಡು ವರ್ಷಗಳಲ್ಲಿ ಮಳೆಗಾಲದ ಸಂದರ್ಭ ಸುಳ್ಯದ ಬಹುತೇಕ ಕಡೆಗಳಲ್ಲಿ ಪ್ರಾಕೃತಿಕ ವಿಕೋಪಗಳು ಸಂಭವಿಸಿದಾಗ ರಾತ್ರಿ ಹಗಲು ಎನ್ನದೆ ತೊಂದರೆಗೆಡಾಗಿರುವ ಪರಿಸರ ಗಳಿಗೆ ಭೇಟಿ ನೀಡಿ ತೊಂದರೆಗೀಡಾದಂತಹ ಜನರಿಗೆ ಧೈರ್ಯವನ್ನು ತುಂಬುವ ಮೂಲಕ ಸಾರ್ವಜನಿಕರಿಂದ ಮೆಚ್ಚುಗೆಯನ್ನು ಪಡೆದುಕೊಂಡಿದ್ದರು.
ಇತ್ತೀಚಿನ ದಿನಗಳಲ್ಲಿ ಸುಳ್ಯದಲ್ಲಿ ಕೆಲವು ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ, ಅಕ್ರಮ ಮರಳು ಸಾಗಾಟ ಇವುಗಳ ಮೇಲೆ ಮೇಲಧಿಕಾರಿಗಳ ನಿರ್ದೇಶನದ ಮೇರೆಗೆ ದಾಳಿಗಳನ್ನು ನಡೆಸಿ ಅಕ್ರಮ ಗಣಿಗಾರಿಕೆ ನಡೆಸುವವರಿಗೆ ಸಿಂಹ ಸ್ವಪ್ನವಾಗಿದ್ದರು.