ಫಾಝಿಲ್ ಹತ್ಯೆಯನ್ನು ಸಮರ್ಥಿಸಿ ಭಾಷಣ ಮಾಡಿದ ಶರಣ್ ಪಂಪ್ ವೆಲ್ ವಿರುದ್ಧ ಎಫ್ಐಆರ್ ದಾಖಲು
ಸುರತ್ಕಲ್ ನಲ್ಲಿ ನಡೆದ ಫಾಝಿಲ್ ಕೊಲೆಯನ್ನು ಪ್ರವೀಣ್ ನೆಟ್ಟಾರು ಕೊಲೆಗೆ ಪ್ರತೀಕಾರ’ ಎಂದು ಸಾರ್ವಜನಿಕ ಕಾರ್ಯಕ್ರಮದಲ್ಲಿ ಹೇಳಿಕೆ ನೀಡಿದ್ದ ಬಜರಂಗದಳ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ತುಮಕೂರು ಜಿಲ್ಲೆಯ ತಿಲಕ್ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಸೈಯದ್ ಬುರ್ಹಾನ್ ಉದ್ದೀನ್ ಅವರು ನೀಡಿದ ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತುಮಕೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಶರಣ್ ಪಂಪ್ ವೆಲ್ ಅವರು ಪ್ರವೀಣ್ ನೆಟ್ಟಾರು ಹತ್ಯೆ ವಿಚಾರ ಉಲ್ಲೇಖಿಸಿ ಇಡೀ ಮಾರ್ಕೆಟ್ ನಲ್ಲಿದ್ದ ಜನರ ಎದುರೇ ನುಗ್ಗಿ ನುಗ್ಗಿ ಹೊಡೆದು ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತಿಕಾರ ನೀಡ್ತಾರಲ್ವ ಅದು ಹಿಂದೂ ಯುವಕರ ತಾಕತ್ತು” ಎಂದು ಫಾಝಿಲ್ ಹತ್ಯೆಯನ್ನು ಸಮರ್ಥಿಸಿಕೊಂಡಿದ್ದರು. ಈ ಕುರಿತ ವೀಡಿಯೊ ಸಾಮಾಜಿಕ ತಾಣದಲ್ಲಿ ವೈರಲ್ ಆಗುತ್ತಿದ್ದಂತೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.
ಶರಣ್ ಪಂಪ್ ವೆಲ್ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಿ ಹಲವು ಸಂಘಟನೆಗಳು ದೂರು ನೀಡಿತ್ತು. ಗಡಿ ಪಾರು ಮಾಡಿವಂತೆಯೂ ಆಗ್ರಹ ವ್ಯಕ್ತವಾಗಿತ್ತು.