ಕ್ರೈಂಜಿಲ್ಲೆರಾಜ್ಯ

ಪ್ರೀತಿಸುವಂತೆ ಕಿರುಕುಳ: ಆತ್ಮಹತ್ಯೆಗೆ ಶರಣಾದ ದಂತ ವೈದ್ಯೆ



ಬೆಂಗಳೂರು: ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊರ್ವರ ಕಾಟಕ್ಕೆ ಬೇಸತ್ತು ದಂತ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಜಯ್ ನಗರದಲ್ಲಿ ನಡೆದಿದೆ.

ಉತ್ತರಪ್ರದೇಶದ ಲಕ್ನೋ ಮೂಲದ ದಂತ ವ್ಯೆದ್ಯೆ ಪ್ರಿಯಾಂನ್ಷಿ ತ್ರಿಪಾಠಿ ಆತ್ಮಹತ್ಯೆಗೆ ಶರಣಾದವರು.

ಎಂ ಎಸ್ ರಾಮಯ್ಯ ಆಸ್ಪತ್ರೆಯ ದಂತವೈದ್ಯೆ ಆಗಿದ್ದ ಪ್ರಿಯಾಂನ್ಷಿ ಅವರಿಗೆ ಅದೇ ಆಸ್ಪತ್ರೆಯಲ್ಲಿ ವೈದ್ಯನಾಗಿದ್ದ ಸುಮಿತ್, ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಸಮಿತ್ ನ ಪ್ರೀತಿಗೆ ಪ್ರಿಯಾಂನ್ಷಿ ಒಪ್ಪಿರಲಿಲ್ಲ. ಇದರಿಂದ ಕೋಪಗೊಂಡ ವೈದ್ಯ ಸುಮಿತ್, ಪ್ರಿಯಾಂನ್ಷಿ ತ್ರಿಪಾಠಿಯ ವ್ಯಕ್ತಿತ್ವದ ಬಗ್ಗೆ ಕೆಟ್ಟದಾಗಿ ಬಿಂಬಿಸಿದ್ದ ಎಂದು ಆರೋಪಿಸಲಾಗಿದೆ.

ಇದೇ ಕಾರಣಕ್ಕೆ ಬೇಸರಗೊಂಡಿದ್ದ ಪ್ರಿಯಾಂನ್ಷಿ ತ್ರಿಪಾಠಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಪ್ರಿಯಾಂನ್ಷಿ ತಂದೆ ಸುಶೀಲ್ ತ್ರಿಪಾಠಿ ದೂರು ನೀಡಿದ್ದು ಪ್ರಕರಣ ದಾಖಲಿಸಿರುವ ಸಂಜಯನಗರ ಪೊಲೀಸರು ಐಪಿಸಿ ಸೆಕ್ಷನ್ 306 ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!