ಸುಬ್ರಹ್ಮಣ್ಯ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಕಾಡಿನಲ್ಲಿ ಪತ್ತೆ
ಸುಬ್ರಹ್ಮಣ್ಯದ ಕುಮಾರಧಾರ ಬಳಿಯ ಕಾಡಿನೊಳಗೆ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೋರ್ವರ ಮೃತ ದೇಹ ಕೊಳೆತ ಸ್ಥಿತಿಯಲ್ಲಿ ಫೆ. 3 ರಂದು ಸಂಜೆ ಪತ್ತೆಯಾಗಿದೆ.

ಮೇಲ್ನೋಟಕ್ಕೆ ಆತ್ಮಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಸುಳ್ಯ ವೃತ್ತ ನಿರೀಕ್ಷಕರಾದ ರವೀಂದ್ರ ಸಿ. ಎಂ,ಸುಬ್ರಮಣ್ಯ ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ತೆರಳಿ ಪರಿಶೀಲನೆ ಮಾಡಿದ್ದಾರೆ.
ವ್ಯಕ್ತಿ ಯಾರು? ಎಲ್ಲಿಯವರು ಎಂಬುವುದು ತಿಳಿದು ಬಂದಿಲ್ಲ. ಪೊಲೀಸರು ತನಿಖೆ ಆರಂಭಿಸಿದ್ದಾರೆ.