ಕರಾವಳಿ

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಆಟೋ ರಿಕ್ಷಾ- ಮಹಿಳೆ ದಾರುಣ ಸಾವು



ಬೆಳ್ತಂಗಡಿ: ಆಟೊ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಮುಂಡಾಜೆ ಕಾಪು ಎಂಬಲ್ಲಿ ನಡೆದಿದೆ.



ಕಕ್ಕಿಂಜೆ ಕತ್ತರಿಗುಡ್ಡೆ ನಿವಾಸಿ ಸಫಿಯಾ(55.ವ ) ಮೃತ ಮಹಿಳೆ ಎಂದು ತಿಳಿದು ಬಂದಿದೆ.



ಫೆ.3ರಂದು ರಾತ್ರಿ ಮುಂಡಾಜೆಯಿಂದ ಕಕ್ಕಿಂಜೆ ಕಡೆಗೆ ಹೋಗುತ್ತಿದ್ದ ರಿಕ್ಷಾ ಚಾಲಕನ ನಿಯಂತ್ರಣ ಕಳೆದುಕೊಂಡು ನದಿಗೆ ಉರುಳಿ ಬಿದ್ದಿದೆ.



ಈ ವೇಳೆ ಮಹಿಳೆ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.



ಧರ್ಮಸ್ಥಳದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!