ಕರಾವಳಿ

ಸುಳ್ಯ: ಪೆರಾಜೆ ಬಳಿ ಬೈಕ್ ಮತ್ತು ಪಿಕಪ್ ಜೀಪು ಮುಖಾಮುಖಿ ಡಿಕ್ಕಿ; ಬೈಕ್ ಸವಾರರಿಗೆ ಗಾಯ




ಸುಳ್ಯ :ಪೆರಾಜೆ ದಾಸರ ಹಿತ್ಲು ಮಾಣಿ ಮೈಸೂರು ಹೆದ್ದಾರಿಯಲ್ಲಿ ಪಿಕಪ್ ವಾಹನ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಗೆ ತೀವ್ರ ಗಾಯಗಳಾಗಿದೆ ಎಂದು ತಿಳಿದುಬಂದಿದೆ.

ಅರಂತೋಡಿನಿಂದ ಬರುತ್ತಿದ್ದ ಬೈಕ್ ಹಾಗೂ ಪೆರಾಜೆಯಿಂದ ಅರಂತೋಡಿಗೆ ಹೋಗುತ್ತಿದ್ದ ಪಿಕ್ ಅಪ್ ವಾಹನದ ನಡುವೆ ಡಿಕ್ಕಿ ಸಂಭವಿಸಿದ್ದು ಬೈಕ್ ಸವಾರ ಮತ್ತು ಸಹಸವಾರನಿಗೆ ಗಾಯಗಳಾಗಿದೆ ಎಂದು ತಿಳಿದುಬಂದಿದೆ.


ಸ್ಥಳೀಯ ಎರಡು ಆಂಬುಲೆನ್ಸ್ ವಾಹನಗಳಲ್ಲಿ ಗಾಯಾಳುಗಳನ್ನು ಸುಳ್ಯ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

Leave a Reply

Your email address will not be published. Required fields are marked *

error: Content is protected !!