ಕರಾವಳಿ

ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳ ಸಮಾರೋಪ



ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಭಾರತ ಸೇವಾದಳ ಸುಳ್ಯ ತಾಲೂಕು ಸಮಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪಯಸ್ವಿನಿ ಪ್ರೌಢ ಶಾಲೆ ಜಾಲ್ಸೂರು ಇವರ ಸಂಯೋಜಕತ್ವದಲ್ಲಿ ತಾಲೂಕು ಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳ ಸಮಾರೋಪ ಸಮಾರಂಭ ನಡೆಯಿತು.


ಚಟುವಟಿಕೆ ಯನ್ನು ಪಯಸ್ವಿನಿ ಪ್ರೌಢಶಾಲಾ ಸಂಚಾಲಕ ಜಾಕೆ ಸದಾನಂದ ಡೋಲ್ ಬಾರಿಸುವುದರ ಮೂಲಕ ಉದ್ಘಾಟಿಸಿದರು.



ಸಭಾಧ್ಯಕ್ಷತೆಯನ್ನು ನಿವೃತ್ತ ಪ್ರಿನ್ಸಿಪಾಲ್ ಹಾಗೂ ಸುಳ್ಯ ತಾಲೂಕು ಸೇವಾದಳದ ಅಧ್ಯಕ್ಷ ಪ್ರೊ.ಕೆ.ವಿ.ದಾಮೋದರ ಗೌಡ ವಹಿಸಿದರು.


ಮುಖ್ಯ ಅತಿಥಿಗಳಾಗಿ ಭಾರತ್ ಸೇವಾದಳದ ಜಿಲ್ಲಾ ಸಮಿತಿ ಸದಸ್ಯರಾದ ವಿಶ್ವೇಶ್ವರ ಭಟ್, ಕೋಶಾಧ್ಯಕ್ಷ ಸದಾಶಿವ.ಎ, ತಾಲೂಕು ಪ್ರಭಾರ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸೂಫಿ ಪೆರಾಜೆ, ನಿವೃತ್ತ ಶಿಕ್ಷಣ ಸಂಯೋಜಕ ಕೇಶವ.ಸಿ.ಎ, ಪಯಸ್ವಿನಿ ಪ್ರೌಢಶಾಲಾ ಮುಖ್ಯಶಿಕ್ಷಕಿ ಕುಸುಮಾವತಿ ಯು.ಪಿ, ಸಿ.ಆರ್.ಪಿ ಸವಿತಾ, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷೆ ತಿರುಮಲೇಶ್ವರಿ ಎ.ಎಲ್ ಭಾಗವಹಿಸಿದರು. ಭಾರತ ಸೇವಾದಳದ ಜಿಲ್ಲಾ ಸಂಘಟಕ ಟಿ.ಎಸ್.ಮಂಜೇಗೌಡ ಪ್ರಾಸ್ತಾವಿಕ ಮಾತನಾಡಿದರು. ಸೇವಾದಳದ ರಿಹರ್ಸಲ್ ಕಾರ್ಯಕ್ರಮ ವನ್ನು ಸುಳ್ಯ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ವೀಣಾ ಎಂ.ಟಿ ಉದ್ಘಾಟಿಸಿದರು.


ಪಯಸ್ವಿನಿ ಪ್ರೌಢ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಹಾಗೂ ಶಾಖಾ ನಾಯಕ ಶಿವಪ್ರಸಾದ್ ಕೆ ಗೌರವ ಸಲಾಮ್ ನೆರವೇರಿಸಿ, ಕಾರ್ಯಕ್ರಮದ ನೇತೃತ್ವವನ್ನು ವಹಿಸಿದರು. ಇದೇ ಸಂದರ್ಭದಲ್ಲಿ ದೇವಚಳ್ಳ ಹಿ.ಪ್ರಾ ಶಾಲಾ ಶಿಕ್ಷಕಿ ಶಶಿಕಲ ಪಿ., ಅರಂತೋಡು ಹಿ.ಪ್ರಾ.ಶಾಲಾ ಶಿಕ್ಷಕಿ ಶಾರದಾ.ಕೆ ಇವರನ್ನು ಸನ್ಮಾನಿಸಲಾಯಿತು. ಬಳಿಕ ಮೇಳದಲ್ಲಿ ಭಾಗವಹಿಸಿದ ಶಾಲೆಗಳಿಗೆ ಪ್ರಶಸ್ತಿ ಪತ್ರಗಳನ್ನು ನೀಡಲಾಯಿತು.


ಪಯಸ್ವಿನಿ ಪ್ರೌಢಶಾಲಾ ಶಿಕ್ಷಕಿ ಜಯಲತಾ ಕೆ.ಆರ್ ವಂದಿಸಿದರು. ಶಿಕ್ಷಕಿ ಸವಿತಾ ಕುಮಾರಿ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

error: Content is protected !!