ಟರ್ಕಿ, ಸಿರಿಯಾ ಭೀಕರ ಭೂಕಂಪ: 20 ಸಾವಿರ ಗಡಿ ದಾಟಿದ ಸಾವಿನ ಸಂಖ್ಯೆ
ಭೀಕರ ಭೂಕಂಪದಿಂದ ಟರ್ಕಿ ಮತ್ತು ಸಿರಿಯಾದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಇದೆ. ಮೃತರ ಸಂಖ್ಯೆ 20 ಸಾವಿರ ಗಡಿ ದಾಟಿದೆ.
ಕಾಣೆಯಾದವರಿಗೆ ಶೋಧ ನಡೆಯುತ್ತಿದೆ. ನಾಲ್ಕು ದಿನಗಳ ಹಿಂದೆ ರಿಕ್ಟರ್ ಮಾಪಕದಲ್ಲಿ 7.8 ತೀವ್ರತೆಯ ಭೂಕಂಪ ಸಂಭವಿಸಿತ್ತು. ಇದರಿಂದ ಸಾವಿರಾರು ಮನೆಗಳು, ಕಟ್ಟಡಗಳು ಧರೆಗುರುಳಿವೆ.
ಭೂಕಂಪ
ದಿಂದ ನಲುಗಿದ ನಗರಗಳಲ್ಲಿ ಅವಶೇಷಗಳ ತೆರವು ಕಾರ್ಯ ನಡೆಯುತ್ತಿದ್ದು ಬದುಕುಳಿದವರಿಗಾಗಿ ರಕ್ಷಣಾ ಕಾರ್ಯ ಮುಂದುವರಿದಿದೆ.