ಕ್ರೈಂಜಿಲ್ಲೆ

ಹುಡುಗಿ ಜೊತೆ ಅಸಭ್ಯ ವರ್ತನೆ ಆರೋಪ: ಸಹೋದರರ ತಲೆ ಬೋಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ



ಹುಡುಗಿ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇರೆಗೆ ಸಹೋದರರ ತಲೆ ಬೋಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿರುವ ಅಮಾನವೀಯ ಘಟನೆ ವಿಜಯಪುರದ ಹೆಗಡಿಹಾಳ ಲಂಬಾಣಿ ತಾಂಡಾದ ಬಸವ ನಗರದಲ್ಲಿ ನಡೆದಿದೆ.



ಹೆಗಡಿಹಾಳ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಸಿಂಗ್ ಹಾಗೂ ತಾಂಡಾದ ಪಂಚರ ಸಮ್ಮುಖದಲ್ಲಿ ತೇಜು ಚವ್ಹಾಣ, ರಾಜು ಚವ್ಹಾಣ ಎಂಬುವರ ತಲೆ ಬೋಳಿಸಿ, ಸುಣ್ಣ ಬಳಿದು, ಚಪ್ಪಲಿ ಹಾರ ಹಾಕಿ ಮೆರವಣಿಗೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.



ತಾಂಡಾದಿಂದ ಜೊತೆಯಾಗಿ ಮಹಾರಾಷ್ಟ್ರಕ್ಕೆ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಒಂದು ತಿಂಗಳ ಹಿಂದೆ ತಮ್ಮದೇ ತಾಂಡಾದ ಹುಡುಗಿಯೊಂದಿಗೆ ಈ ಸಹೋದರರು ಅಸಭ್ಯವಾಗಿ ವರ್ತಿಸಿದ್ದರು ಎನ್ನಲಾಗಿದೆ. ಇದೀಗ ತಾಂಡಾಕ್ಕೆ ಮರಳಿ ಬಂದಾಗ ಪಂಚರು ವಿಚಾರಣೆ ನಡೆಸಿ, ಗ್ರಾಮಸ್ಥರ ಸಮ್ಮುಖದಲ್ಲಿ ಅಮಾನವೀಯವಾಗಿ ಶಿಕ್ಷೆ ವಿಧಿಸಿದ್ದಾರೆ.

ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!