ಸುಳ್ಯ ನ್ಯಾಯಾಲಯದಲ್ಲಿ ಲೋಕ್ ಅದಾಲತ್: ನ್ಯಾಯಾಧೀಶೆ ಕು.ಅರ್ಪಿತಾರವರ ಸಮಕ್ಷಮದಲ್ಲಿ ಹಲವು ಪ್ರಕರಣಗಳು ಇತ್ಯರ್ಥ
ಸುಳ್ಯ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ವತಿಯಿಂದ ಕರ್ನಾಟಕ ರಾಜ್ಯದ್ಯಂತ ಫೆಬ್ರವರಿ 11ರಂದು ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮ ಆಯೋಜಿಸಲಾಗಿದ್ದು,ಇದರ ಅಂಗವಾಗಿ ಸುಳ್ಯ ನ್ಯಾಯಾಲಯದಲ್ಲಿ ಫೆ. 11ರಂದು ಲೋಕ್ ಅದಾಲತ್ ಕಾರ್ಯಕ್ರಮ ನಡೆಯಿತು.
ಬೆಳಿಗ್ಗೆ 10.30 ರಿಂದ ಆರಂಭಗೊಂಡ ಅದಾಲತ್ತಿನಲ್ಲಿ
ಸುಳ್ಯ ನ್ಯಾಯಾಲಯದ ಕಿರಿಯ ಸಿವಿಲ್ ನ್ಯಾಯಾಧೀಶೆ ಕು. ಅರ್ಪಿತಾ ರವರ ಸಮಕ್ಷಮದಲ್ಲಿ ಹಲವಾರು ವ್ಯಾಜ್ಯ ಪ್ರಕರಣಗಳು ಇತ್ಯರ್ಥಗೊಂಡವು.
ಅದಾಲತ್ತಿನಲ್ಲಿ ಸುಳ್ಯ ನ್ಯಾಯಾಲಯದ ಪ್ಯಾನಲ್ ವಕೀಲರಾದ ಶ್ರೀಹರಿ ಕುಕ್ಕುಡೇಲು, ಚರಣ್ ಭಾಗವಹಿಸಿದ್ದರು.
ಹಿರಿಯ ವಕೀಲರಾದ ಎಂ ವೆಂಕಪ್ಪಗೌಡ, ಸಹಾಯಕ ಸರ್ಕಾರಿ ಅಭಿಯೋಜಕ ಅರೋಣ್ ಡಿಸೋಜ, ಸುಳ್ಯ ತಾಲೂಕು ವಕೀಲರ ಸಂಘದ ಕೋಶಾಧಿಕಾರಿ ಜಗದೀಶ್ ಡಿ ಪಿ, ವಕೀಲ ರಶೀದ್ ಗೂನಡ್ಕ, ವಕೀಲೆಯರಾದ ಚಂಪಾ ವೆಂಕಪ್ಪಗೌಡ, ಲೋಲಾಕ್ಷಿ ಹಾಗೂ ನ್ಯಾಯಾಲಯದ ಸಿಬ್ಬಂದಿ ವರ್ಗದವರು, ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಲೋಕ್ ಅದಾಲತ್ ಕಾರ್ಯಕ್ರಮದಲ್ಲಿ ರಾಜಿ ಆಗಬಲ್ಲ ಅಪರಾಧಿಕ ಪ್ರಕರಣಗಳನ್ನು,ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕೈಗಾರಿಕಾ ಕಾರ್ಮಿಕ ವೇತನಕ್ಕೆ ಸಂಬಂಧಿಸಿದ ಪ್ರಕರಣಗಳು,ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಸಾಲ ವಸೂಲಾತಿ ನ್ಯಾಯಾಧೀಕರಣ ಪ್ರಕರಣಗಳು ಮುಂತಾದ ಪ್ರಕರಣಗಳ ಇತ್ಯರ್ಥಗಳಿಗೆ ಇಂದು ಅವಕಾಶಗಳನ್ನು ನೀಡಲಾಗಿತ್ತು.
ಕಾರ್ಯಕ್ರಮದಲ್ಲಿ ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜಿ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನವನ್ನು ಪಡೆದುಕೊಂಡರು.