ಸುಳ್ಯ: ಹೊಳೆಯಲ್ಲಿ ಮುಳುಗಿ ಇಬ್ಬರು ಯುವಕರು ಮೃತ್ಯು
ಸುಳ್ಯ ಪಯಸ್ವಿನಿ ಹೊಳೆಯಲ್ಲಿ ಮುಳುಗಿ ಯುವಕರಿಬ್ಬರು ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ.

ಅಜ್ಜಾವರ ಗ್ರಾಮದ ದೊಡ್ಡೇರಿಗೆ ಕಾರ್ಯಕ್ರಮವೊಂದಕ್ಕೆ ಬಂದಿದ್ದ ಪೈಕಿ ಐದಾರು ಯುವಕರು ಪಕ್ಕದ ಪಯಸ್ವಿನಿ ಹೊಳೆಗೆ ಈಜಾಡಲು ತೆರಳಿದ್ದು ಈ ವೇಳೆ ಇಬ್ಬರು ಯುವಕರು ನೀರುಪಾಲಾದರೆಂದು ತಿಳಿದು ಬಂದಿದೆ.
ಅವರನ್ನು ರಕ್ಷಿಸುವ ಪ್ರಯತ್ನ ಮಾಡಲಾಯಿತಾದರೂ ಆ ವೇಳೆಗೆ ಅವರು ಕೊನೆಯುಸಿರೆಳೆದಿದ್ದರು. ಮೃತದೇಹಗಳನ್ನು ಸರಕಾರಿ ಆಸ್ಪತ್ರೆಗೆ ತರಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.