ಕೊಡಗು: ಗೋಣಿಕೊಪ್ಪ ಬಳಿ ಭೀಕರ ರಸ್ತೆ ಅಪಘಾತ: ಕಾರು ಚಾಲಕ ಮೃತ್ಯು
ಕೊಡಗು ಜಿಲ್ಲೆಯ ಗೋಣಿಕೊಪ್ಪದ ಕೈಕೇರಿ ಬಳಿ ಇಂದು ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿ ಸಂಭವಿಸಿ
ಕಾರು ಚಾಲಕ ಬಿಟ್ಟಂಗಾಲ ನಿವಾಸಿ ನಂದೇಟಿರ ಸದನ್ ಚಂಗಪ್ಪ(49. ವ) ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ.
ವಿರಾಜಪೇಟೆ ಗೋಣಿಕೊಪ್ಪ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ಇತರ ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದು
ಗಾಯಾಳುಗಳನ್ನು ಗೋಣಿಕೊಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ.
ಗೋಣಿಕೊಪ್ಪದಿಂದ ವಿರಾಜಪೇಟೆಗೆ ಬರುತ್ತಿದ್ದ ಕಾರು
ವಿರಾಜಪೇಟೆಯಿಂದ ಮೈಸೂರಿಗೆ ತೆರಳುತ್ತಿದ್ದ ಲಾರಿ ನಡುವೆ ಈ ಡಿಕ್ಕಿ ಸಂಭವಿಸಿದೆ.