ರಾಜಕೀಯರಾಜ್ಯ

ಟಿಪ್ಪುವನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನೂ ಹೊಡೆದು ಹಾಕಬೇಕು ಎಂದು ಕರೆ ನೀಡಿದ ಸಚಿವ ಅಶ್ವತ್ಥ ನಾರಾಯಣ

ಮಂಡ್ಯ: ‘ಟಿಪ್ಪುವನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನೂ ಹೊಡೆದು ಹಾಕಬೇಕು’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರು ಕರೆ ನೀಡುತ್ತಿರುವ ವಿಡಿಯೋ ವೈರಲ್ ಆಗಿದೆ.



ಮಂಡ್ಯ ಜಿಲ್ಲೆಯ ಸಾತನೂರು ಗ್ರಾಮದ ಹೊರವಲಯದ ಕಂಬದನರಸಿಂಹಸ್ವಾಮಿ ದೇವಾಲಯದ ಆವರಣದಲ್ಲಿ ನಡೆದ ಮಹಾಶಕ್ತಿ ಕೇಂದ್ರದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಟಿಪ್ಪು ಎಂದೊಡನೆ ಸಿದ್ದರಾಮಯ್ಯ ಅವರು ಬಂದುಬಿಡುತ್ತಾರೆ. ಉರಿಗೌಡ, ನಂಜೇಗೌಡ ಟಿಪ್ಪುವನ್ನು ಮೇಲಕ್ಕೆ ಕಳುಹಿಸಿದಂತೆ ಇವರನ್ನೂ ಕಳುಹಿಸಬೇಕು, ಹೊಡೆದು ಹಾಕಬೇಕು’ ಎಂದು ಆಘಾತಕಾರಿ ಹೇಳಿಕೆ ನೀಡಿದ್ದಾರೆ.


ಈ ಕುರಿತ ವಿಡಿಯೋ ವೈರಲಾಗಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಈ ರೀತಿ ಕರೆ ಕೊಟ್ಟ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು ಎಂಬ ಆಗ್ರಹ ಕೇಳಿ ಬಂದಿದೆ.

Leave a Reply

Your email address will not be published. Required fields are marked *

error: Content is protected !!