ಕರಾವಳಿ

ಸುಳ್ಯ ತಾಲೂಕಿನ ವಿವಿಧ ಮುಸ್ಲಿಂ ಸಂಘಟನೆ ಮತ್ತು ಮುಖಂಡರಿಂದ ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಹಾಜಿ ಕೆ.ಎಸ್ ಮಸೂದ್’ರವರಿಗೆ ಸನ್ಮಾನ

ಸುಳ್ಯ ತಾಲೂಕಿನ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸುಳ್ಯದ ಮುಸ್ಲಿಂ ಮುಖಂಡರಿಂದ ಸತತ ಐದನೇ ಬಾರಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷರಾಗಿ ಆಯ್ಕೆಯಾದ ಅಲ್ ಹಾಜ್ ಕೆ ಎಸ್ ಮಹಮ್ಮದ್ ಮಸೂದ್ ರವರಿಗೆ ಮಂಗಳೂರಿನ ಸೆಂಟ್ರಲ್ ಕಮಿಟಿ ಕಚೇರಿಯಲ್ಲಿ ಸನ್ಮಾನಿಸಲಾಯಿತು.

ಸನ್ಮಾನವನ್ನು ಸ್ವೀಕರಿಸಿದ ಅಲ್ ಹಾಜ್ ಕೆ ಎಸ್ ಮಹಮ್ಮದ್ ಮಸೂದ್ ರವರು ಮಾತನಾಡಿ ಈಗಾಗಲೇ ಮುಸ್ಲಿಂ ಸೆಂಟ್ರಲ್ ಕಮಿಟಿ ವತಿಯಿಂದ ಸುಳ್ಯದ ಕಳಂಜದಲ್ಲಿ ಹತ್ಯೆಗೀಡಾದ ಮಸೂದ್ ಕುಟುಂಬಕ್ಕೆ ರೂ 30 ಲಕ್ಷ ಧನ ಸಹಾಯ ನೀಡಿದ್ದು, ಕಡಬದ ನಾಸಿರ್ ಎಂಬ ಯುವಕನಿಗೆ ಕಿಡ್ನಿ ವೈಫಲ್ಯ ದಿಂದ ಸಂಕಷ್ಟದಲ್ಲಿರುವುದನ್ನು ಮನಗಂಡು ರೂ 50,000 ಧನಸಹಾಯವನ್ನು ನೀಡಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ನಮ್ಮ ಈ ಸೇವಾ ಕಾರ್ಯಕ್ರಮಗಳನ್ನು ವಿಸ್ತರಿಸಲಾಗುವುದು ಎಂದು ಹೇಳಿದರು.

ಮುಸ್ಲಿಂ ಸೆಂಟ್ರಲ್ ಕಮಿಟಿ ಇದರ ಸಂಘಟನಾ ಕಾರ್ಯದರ್ಶಿ ಎಸ್ ಸಂಶುದ್ದೀನ್ ರವರು ಈ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.


ಈ ಸಂದರ್ಭದಲ್ಲಿ ಜಾವಗಲ್ ಟ್ರಸ್ಟಿನ ಮ್ಯಾನೇಜಿಂಗ್ ಟ್ರಸ್ಟಿ ಹಾಜಿ ಪಿ ಇಸಾಕ್ ಸಾಹೇಬ್ ಪಾಜಪ್ಪಳ್ಳ, ಜಿಲ್ಲಾ ಎಐಕೆಎಂಸಿಸಿ ಖಜಾಂಜಿ ಇಬ್ರಾಹಿಂ ಹಾಜಿ ಕತ್ತರ್ ಮಂಡೆಕೋಲು,ಜಿಲ್ಲಾ ಮುಸ್ಲಿಂ ಒಕ್ಕೂಟ ದ ಅಧ್ಯಕ್ಷ ಮಾಜಿ ಮೇಯರ್ ಅಶ್ರಫ್,ಸುಳ್ಯ ಮುಸ್ಲಿಂ ಒಕ್ಕೂಟದ ಸಂಚಾಲಕ ಇಕ್ಬಾಲ್ ಎಲಿಮಲೆ,ಸುಳ್ಯ ನಗರ ಪಂಚಾಯಿತಿ ಸದಸ್ಯ ಕೆ.ಎಸ್. ಉಮ್ಮರ್, ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯ ಮಾಜಿ ಅಧ್ಯಕ್ಷ ಪಿ. ಎ. ಮಹಮ್ಮದ್,ಸೆಂಟ್ರಲ್ ಕಮಿಟಿ ಪದಾಧಿಕಾರಿಗಳಾದ ನೂರುದ್ದೀನ್ ಸಾಲ್ಮರ, ಇಬ್ರಾಹಿಂ ಕೋಡಿಚ್ಚಾಲ್,ಸಿ. ಎಂ. ಮುಸ್ತಫ ಎಣ್ಮೂರು ಜಮಾಅತ್ ಅಧ್ಯಕ್ಷ ಅಬ್ದುಲ್ ಗಫೂರ್ ಕಲ್ಮಡ್ಕ,ಸುಳ್ಯ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಇಸ್ಮಾಯಿಲ್ ಪಡ್ಪಿನಂಗಡಿ,ಆರ್ ಟಿ ಐ ಕಾರ್ಯಕರ್ತ ಹನೀಫ್ ಪಾಜಪ್ಪಲ್ಲ, ಅನ್ಸಾರ್ ಮುಸ್ಲಿಂ ಆಸೋಸಿಯೇಷನ್ ನಿರ್ದೇಶಕ ಕೆ. ಬಿ. ಇಬ್ರಾಹಿಂ, ಮೊದಲಾದವರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

error: Content is protected !!