ರಾಜಕೀಯರಾಜ್ಯ

ಹತ್ಯೆ ಮಾಡಲು ಕರೆ ನೀಡುವ ಸಚಿವರನ್ನು ತಕ್ಷಣ ಸಂಪುಟದಿಂದ ತಕ್ಷಣ ಕಿತ್ತು ಹಾಕಿ: ರಾಜ್ಯಪಾಲರನ್ನು ಒತ್ತಾಯಿಸಿದ ಸಿದ್ದರಾಮಯ್ಯ

ಹತ್ಯೆ ಮಾಡಲು ಕರೆ ನೀಡುವ ಸಚಿವರಿಗೆ ಸಂಪುಟದಲ್ಲಿ ಮುಂದುವರಿಯುವ ಯಾವ ನೈತಿಕತೆಯೂ ಇಲ್ಲ. ರಾಜ್ಯಪಾಲರು ತಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್ ಅವರನ್ನು ಸಂಪುಟದಿಂದ ಕಿತ್ತುಹಾಕಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು ರಾಜ್ಯಪಾಲರು ಮಧ್ಯಪ್ರವೇಶಿಸುವಂತೆ ಆಗ್ರಹಿಸಿದ್ದಾರೆ.

ಕೆಲ ದಿನಗಳ ಹಿಂದೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಡಾಕ್ಟರ್ ಅಶ್ವತ್ ನಾರಾಯಣ್ ಅವರು ಟಿಪ್ಪು ಅವರನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯರವರನ್ನು ಹೊಡೆದು ಹಾಕಬೇಕು ಎಂದು ಹೇಳಿಕೆ ನೀಡಿದರು.

Leave a Reply

Your email address will not be published. Required fields are marked *

error: Content is protected !!