ಕ್ರಿಕೆಟ್ ಪಂದ್ಯಾಟದಲ್ಲಿ ಇಬ್ಬರು ಯುವಕರ ಹತ್ಯೆ ಪ್ರಕರಣ: ಗುಂಡು ಹಾರಿಸಿ ಆರೋಪಿಗಳಿಬ್ಬರನ್ನು ಬಂಧಿಸಿದ ಪೊಲೀಸರು
ಚಾಕು ಇರಿತ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸುವ ಸಂದರ್ಭದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿ, ತಪ್ಪಿಸಿಕೊಳ್ಳಲು ಯತ್ನಿಸಿದ್ದ ವಿನಯ್ ಹಾಗೂ ತ್ರಿಮೂರ್ತಿ ಎಂಬವರ ಮೇಲೆ ಗುಂಡುಹಾರಿಸಿ ಬಂಧಿಸಲಾಗಿದೆ.

ನಗರದ ಡಿ.ಕ್ರಾಸ್ ಸಮೀಪದ ಪ್ಲೈ ಓವರ್ನ ರೈಲ್ವೆ ಗೇಟ್ ಬಳಿ ಆರೋಪಿಗಳು ಇರುವ ಖಚಿತ ಮಾಹಿತಿ ಮೇರೆಗೆ ಬಂಧಿಸಲು ಸಿಬ್ಬಂದಿಗಳೊಂದಿಗೆ ಗ್ರಾಮಾಂತರ ಪೊಲೀಸ್ ಠಾಣೆ ಇನ್ ಸ್ಪೆಕ್ಟರ್ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಇನ್ ಸ್ಪೆಕ್ಟರ್ ತೆರಳಿದ್ದರು. ಆರೋಪಿಗಳು ತಪ್ಪಿಸಿಕೊಳ್ಳುವ ಸಲುವಾಗಿ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಬಂಧಿತ ಆರೋಪಿಗಳು
ಗಾಯಗೊಂಡ ಆರೋಪಿಗಳು ಹಾಗೂ ಪೊಲೀಸ್ ಸಿಬ್ಬಂದಿಯನ್ನು ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲಿಸಲಾಗಿದೆ.
ಕ್ರಿಕೆಟ್ ಆಟದ ವಿಚಾರಕ್ಕೆ ಸಂಬಂಧಿಸಿದಂತೆ ದೊಡ್ಡಬೆಳವಂಗಲ ಬಸ್ ನಿಲ್ದಾಣದ ಬಳಿ ಭರತ್ ಕುಮಾರ್ ಹಾಗೂ ಪ್ರತೀಕ್ ಎಂಬ ಯುವಕರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿತ್ತು.