ಸುಳ್ಯ: ಪಾಲಡ್ಕ ಬಳಿ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ, ಹಲವರಿಗೆ ಗಾಯ; ಕಾರುಗಳು ಜಖಂ
ಸುಳ್ಯ ಮಾಣಿ ಮೈಸೂರು ಹೆದ್ದಾರಿ ಪಾಲಡ್ಕ ಸಮೀಪ ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ವೃದ್ದೆ ಸೇರಿದಂತೆ ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ಇದೀಗ ವರದಿಯಾಗಿದೆ.

ಸುಳ್ಯ ಕಡೆಯಿಂದ ಮಡಿಕೇರಿಗೆ ಹೋಗುತ್ತಿದ್ದ ಸ್ವಿಫ್ಟು ಕಾರು ಮಡಿಕೇರಿಯಿಂದ ಮಂಗಳೂರಿನ ಕಡೆ ಬರುತ್ತಿದ್ದ ಇನ್ನೊಂದು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಘಟನೆಯಿಂದ ಕಾರುಗಳು ಸಂಪೂರ್ಣ ಜಖಂಗೊಂಡಿದ್ದು ಗಾಯಾಳುಗಳನ್ನು ಸುಳ್ಯ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.