ರಾಷ್ಟ್ರೀಯ

ಕೋಳಿ ಆಸೆಗೆ ಚಿರತೆ ಬೋನಿಗೆ ಬಿದ್ದ ಭೂಪ





ಆಸೆ ಮಿತಿ ಮೀರಿದರೆ ಕೆಲವೊಮ್ಮೆ ಸಮಸ್ಯೆಗಳಿಗೆ ಸಿಲುಕಿದ ಘಟನೆಗಳು ಪ್ರಪಂಚದ ಬೇರೆ ಬೇರೆ ಕಡೆಗಳಲ್ಲಿ ನಡೆಯುತ್ತಿರುವುದು ಕಂಡು ಬರುತ್ತಿದೆ.

ಸಾಂದರ್ಭಿಕ ಚಿತ್ರ

ಇದಕ್ಕೆ ಉದಾಹರಣೆ ಎಂಬಂತೆ ಭಾರತದಲ್ಲೂ ಅಂತಹದೇ ಘಟನೆಯೊಂದು ನಡೆದಿದೆ. ಉತ್ತರ ಪ್ರದೇಶದ ಬುಲಂದ್‌ ಶಹರ್‌ನಲ್ಲಿ ಚಿರತೆಗಾಗಿ ಇರಿಸಿದ್ದ ಬೋನಿನಲ್ಲಿ ವ್ಯಕ್ತಿಯೊಬ್ಬ ಸಿಕ್ಕಿಬಿದ್ದ ಘಟನೆ ನಡೆದಿದೆ.

ಆತ ಚಿರತೆಯನ್ನು ಹಿಡಿಯಲು ಇರಿಸಿದ್ದ ಕೋಳಿಯನ್ನು ಹಿಡಿಯಲು ಹೋಗಿ ತಾನೇ ಬೋನಿನ ಒಳಗಡೆ ಸಿಕ್ಕಿಬಿದ್ದಿದ್ದಾನೆ. ಬಳಿಕ ಆತನನ್ನು ಬಿಡುಗಡೆ ಮಾಡಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಅರಣ್ಯ ಇಲಾಖೆಯ ಸಿಬ್ಬಂದಿ ಬೋನ್ ಇರಿಸಿದ್ದ ಜಾಗಕ್ಕೆ ತೆರಳಿದಾಗ ಒಳಗೆ ಸಿಲುಕಿದ್ದ ವ್ಯಕ್ತಿಯನ್ನು ನೋಡಿ ಅಚ್ಚರಿಗೊಂಡಿದ್ದಾರೆ. ಬೋನಿನಲ್ಲಿ ಸೆರೆಯಾದ ವ್ಯಕ್ತಿಯ ವೀಡಿಯೋ ವೈರಲ್ ಆಗಿದೆ.

ಬೋನಿನ ಸರಳುಗಳನ್ನು ಹಿಡಿದುಕೊಂಡು ರಕ್ಷಿಸುವಂತೆ ಕೂಗಿಕೊಳ್ಳುತ್ತಿರುವ ದೃಶ್ಯದ ವೀಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ.

Leave a Reply

Your email address will not be published. Required fields are marked *

error: Content is protected !!