ಕಡಬ: ಕುಟ್ರುಪ್ಪಾಡಿ ಗ್ರಾ.ಪಂ ಉಪ ಚುನಾವಣೆ-ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಭರ್ಜರಿ ಗೆಲುವು
ಪುತ್ತೂರು: ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾ.ಪಂನ ಬಲ್ಯ ವಾರ್ಡ್1ರಲ್ಲಿ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುದೇಶ್‌ರವರು 221 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ.

ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುದೇಶರವರು 400 ಮತಗಳನ್ನು ಪಡೆದು 179 ಮತಗಳನ್ನು ತನ್ನ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಕರುಣಾಕರ ವಿರುದ್ಧ 221 ಮತಗಳ ಅಂತರದಿಂದ ಜಯಗಳಿಸಿದ್ದಾರೆ.
ಪಕ್ಷೇತರ ಅಭ್ಯರ್ಥಿ ಸುಧಾಕರ ಬಾರಿಕೆ 167 ಮತಗಳನ್ನು ಪಡೆದುಕೊಂಡಿದ್ದಾರೆ.