ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್
ಮೈಸೂರು: ನರಸಿಂಹರಾಜ ಕ್ಷೇತ್ರದ ಹಾಲಿ ಶಾಸಕ, ಮಾಜಿ ಸಚಿವ ತನ್ವೀರ್ ಸೇಠ್ ಅವರು ರಾಜಕೀಯ ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ. ರಾಜೀನಾಮೆ ಸುದ್ದಿ ಪ್ರಚಾರ ಆಗುತ್ತಿದ್ದಂತೆ ಅವರ ನಿವಾಸದ ಎದುರು ಬೆಂಬಲಿಗರು, ಅಭಿಮಾನಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಡಿಸೆಂಬರ್ ನಲ್ಲಿ ಪತ್ರ ಬರೆದಿದ್ದು, ಅನಾರೋಗ್ಯದ ಕಾರಣ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಪತ್ರದಲ್ಲಿ ತಿಳಿಸಿದ್ದರು ಎನ್ನಲಾಗಿದೆ.
ಆರೋಗ್ಯ ಸಮಸ್ಯೆಯಿಂದ ಚುನಾವಣಾ ರಾಜಕೀಯದಿಂದ ದೂರ ಇರುವುದಾಗಿ ಶಾಸಕ ತನ್ವೀರ್ ಸೇಠ್ ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.