ರಾಜಕೀಯರಾಜ್ಯ

ಬಿಜೆಪಿ ಶಾಸಕನ ಪುತ್ರ ನ ಮನೆಯಲ್ಲಿದ್ದ ರೂ.6 ಕೋಟಿ ನಗದು ವಶಪಡಿಸಿಕೊಂಡ ಲೋಕಾಯುಕ್ತ ಪೊಲೀಸರು: ರಿಸರ್ವ್ ಬ್ಯಾಂಕಿನಲ್ಲಿರುವುದಕ್ಕಿಂತ ಹೆಚ್ಚಿನ ಹಣ ಬಿಜೆಪಿಗರ ಮನೆಯಲ್ಲಿದೆ ಎಂದು ಕಾಂಗ್ರೆಸ್



ಲಂಚ ಪ್ರಕರಣದಲ್ಲಿ ಕೆಎಸ್ ಡಿಎಲ್ ಅಧ್ಯಕ್ಷರೂ ಆಗಿರುವ ಚನ್ನಗಿರಿಯ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಮಗ ಪ್ರಶಾಂತ್ ಶಾಂತ್ ಮಾಡಾಳ್ ಮನೆಯಲ್ಲಿ ರೂ.6 ಕೋಟಿ ನಗದನ್ನು ಲೋಕಾಯುಕ್ತ ಪೊಲೀಸರು ಗುರುವಾರ ತಡರಾತ್ರಿ ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬಿಜೆಪಿ ವಿರುದ್ಧ ಕಾಂಗ್ರೆಸ್ ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದೆ.

ರಿಸರ್ವ್ ಬ್ಯಾಂಕಿನಲ್ಲಿರುವುದಕ್ಕಿಂತ ಹೆಚ್ಚು ಹಣ ಬಿಜೆಪಿಗರ ಮನೆಯಲ್ಲಿದೆ. ಒಬ್ಬ ಶಾಸಕರದ್ದೇ ಇಷ್ಟಿರುವಾಗ ಮಂತ್ರಿಗಳ ಲೂಟಿ ಇನ್ನೆಷ್ಟು? ಇಂದು ಅಮಿತ್ ಶಾ ಬರುತ್ತಿರುವುದಕ್ಕೂ, ಈ ನಿಧಿ ಸಂಗ್ರಹಕ್ಕೂ ಸಂಬಂಧವಿದೆಯೇ? ಅಮಿತ್ ಶಾ ಬರುತ್ತಿರುವುದೇ ಇಲ್ಲಿನ ‘ಸಂಪತ್ತು’ ಕೊಂಡೊಯ್ಯುವುದಕ್ಕಾ? ಎಂದು ಬಿಜೆಪಿಯನ್ನು ಕರ್ನಾಟಕ ಕಾಂಗ್ರೆಸ್ ಪ್ರಶ್ನಿಸಿ ಕಾಲೆಳೆದಿದೆ.


Leave a Reply

Your email address will not be published. Required fields are marked *

error: Content is protected !!