ಮುಖ್ಯಮಂತ್ರಿ ಬೊಮ್ಮಾಯಿ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ: ಸೂಟ್ ಕೇಸ್ ನಲ್ಲಿ ನೋಟು ತುಂಬಿಸಿಕೊಂಡು ಬಿಜೆಪಿಯ ಕಾಲೆಳೆದ ಮುಖಂಡರು
ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಶನಿವಾರ ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ನ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಶಾಸಕರಾದ ದಿನೇಶ್ ಗುಂಡೂರಾವ್, ಕೆ.ಜೆ.ಜಾರ್ಜ್ ಸೇರಿದಂತೆ ಹಲವು ಮುಖಂಡರು, ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.
ಸೂಟ್ ಕೇಸ್ ತುಂಬ ನಕಲಿ ನೋಟುಗಳನ್ನು ಇಟ್ಟು ಪ್ರತಿಭಟನೆ ಮಾಡಲಾಯಿತು. ಬಿಜೆಪಿ ಸರಕಾರದ ವಿರುದ್ಧ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.