ಲಂಚ ಪ್ರಕರಣ: ನಾಪತ್ತೆಯಾಗಿದ್ದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಸಿಕ್ಕಿದ ಕೂಡಲೇ ಪ್ರತ್ಯಕ್ಷ: ಭವ್ಯ ಮೆರವಣಿಗೆ
ಲಂಚ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ 6 ದಿನಗಳ ಬಳಿಕ ಚನ್ನಗಿರಿಯ ನಿವಾಸಕ್ಕೆ ವಾಪಸ್ ಆಗಿದ್ದು ಕೆಲವೇ ಕ್ಷಣದಲ್ಲಿ ಮೆರವಣಿಗೆ ಮಾಡಲಾಗಿದೆ.
ಕೆಎಸ್ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಹೈಕೋರ್ಟ್ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.
ಜಾಮೀನು ಸಿಕ್ಕಿದ ಬೆನ್ನಲ್ಲೇ ವಿರೂಪಾಕ್ಷಪ್ಪ ಮನೆಗೆ ವಾಪಸ್ ಆಗಿದ್ದಾರೆ. ಈ ವೇಳೆ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಕಾರಿನಲ್ಲಿ ಮೆರವಣಿಗೆ ಮಾಡಿದ್ದಾರೆ. ಲಂಚ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಸಕರು ಮೆರವಣಿಗೆ ನಡೆಸಿ ಸಮಾಜಕ್ಕೆ ಏನು ಸಂದೇಶ ನೀಡುತ್ತಿದ್ದಾರೆ ಎಂದು ನೆಟ್ಟಿಗರು ಆಕ್ರೋಶ ಹೊರ ಹಾಕಿದ್ದಾರೆ.