ಸುಳ್ಯ: ಬಿಜೆಪಿ ವಿಜಯ ಸಂಕಲ್ಪ ಯಾತ್ರೆ, ಅದ್ಧೂರಿ ರೋಡ್‌ಶೋ- ಸಾವಿರಾರು ಕಾರ್ಯಕರ್ತರು ಭಾಗಿ
ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ರಾಜ್ಯಾಧ್ಯಂತ ಪ್ರಚಾರ ಆರಂಭಿಸಿರುವ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ಇಂದು ಸುಳ್ಯಕ್ಕೆ ಆಗಮಿಸಿತು.

ಸಚಿವ ಎಸ್.ಅಂಗಾರರ ನೇತೃತ್ವದಲ್ಲಿ ಸುಳ್ಯದಲ್ಲಿ ಯಾತ್ರೆ ನಡೆಯಿತು. ಈ ಸಂದರ್ಭದಲ್ಲಿ
ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಸಚಿವ ಸುನಿಲ್‌ಕುಮಾರ್ ಸಹಿತ ಹಲವು ಮಂದಿ ನಾಯಕರು ಭಾಗವಹಿಸಿದ್ದರು.

ಸುಳ್ಯದ ವಿಷ್ಣು ಸರ್ಕಲ್‌ನಿಂದ ರೋಡ್‌ಶೋಗೆ ಚಾಲನೆ ನೀಡಲಾಯಿತು. ಸಾವಿರ ಸಂಖ್ಯೆಯಲ್ಲಿ ಕಾರ್ಯಕರ್ತರು ರೋಡ್‌ಶೋದಲ್ಲಿ ಭಾಗವಹಿಸಿದ್ದರು.
ಮಧ್ಯಾಹ್ನದ ವೇಳೆಗೆ ವಿಜಯ ಸಂಕಲ್ಪ ಯಾತ್ರೆಗೆ ಸಂಪಾಜೆಗೆ ಆಗಮಿಸಿ ಅಲ್ಲಿ ಸಚಿವ ಎಸ್.ಅಂಗಾರರ ನೇತೃತ್ವದಲ್ಲಿ ಯಾತ್ರೆಯನ್ನು ಬರಮಾಡಿಕೊಳ್ಳಲಾಯಿತು. ಅಲ್ಲಿಂದ ಮುಂದುವರಿದ ಯಾತ್ರೆ ಸುಳ್ಯ ನಗರದ ಮುಖ್ಯರಸ್ತೆಯಲ್ಲಿ ಸಾಗಿ ಪುತ್ತೂರಿನತ್ತ ಸಾಗಿತು.