ರಾಜ್ಯಕ್ಕೆ ಭೇಟಿ ನೀಡಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುವವರಿಗೆ ಹಾಗೂ ಕಾನೂನು ಬಾಹಿರ ಚಟುವಟಿಕೆ ನಡೆಸುವ ರೌಡಿಗಳಿಗೆ ತಲೆಬಾಗಿ ಕೈ ಮುಗಿದಿರುವ ಫೋಟೋ ವೈರಲ್ ಆಗಿದ್ದು ಇದು ನಾಚಿಗೇಡಿನ ಸಂಗತಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಬಿಜೆಪಿ ಸದ್ಯಕ್ಕೆ ಯಾವ ಪರಿಸ್ಥಿತಿಯಲ್ಲಿದೆ ಎಂಬುದನ್ನು ಇದರಿಂದಲೇ ಅರ್ಥ ಮಾಡಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.