ರಾಜ್ಯ ಮಾಸ್ಟರ್ ಕ್ರೀಡಾಕೂಟದಲ್ಲಿ ಹಲವು ಪದಕಗಳನ್ನು ಪಡೆದ ಕಾವು ಅಬ್ದುಲ್ ಲತೀಫ್ ರವರಿಗೆ ಮುಸ್ಲಿಂ ಸೆಂಟ್ರಲ್ ಕಮಿಟಿಯಿಂದ ಸನ್ಮಾನ
ಕೋಲಾರ ಜಿಲ್ಲೆಯ ಪೊಲೀಸ್ ಕ್ರೀಡಾಂಗಣದಲ್ಲಿ ಇತ್ತೀಚಿಗೆ ನಡೆದ ಕರ್ನಾಟಕ ರಾಜ್ಯ ಮಾಸ್ಟರ್ ಕ್ರೀಡಾಕೂಟದಲ್ಲಿ ಪುತ್ತೂರು ತಾಲೂಕು ಕಾವು ಮಾಡನ್ನೂರು ಗ್ರಾಮದ ಅಬ್ದುಲ್ ಲತೀಫ್ ಸಾಹೇಬ್ ರವರು ಚಿನ್ನ ಬೆಳ್ಳಿ ಕಂಚು ಈ ಮೂರು ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಹಿರಿಯರ ವಿಭಾಗದ 400 ಮೀಟರ್ ಓಟದಲ್ಲಿ ಬೆಳ್ಳಿ ಪದಕ, 200 ಮೀಟರ್ ಓಟದಲ್ಲಿ ಕಂಚಿನ ಪದಕ,4*100 ರಿಲೇಯಲ್ಲಿ ಚಿನ್ನದ ಪದಕವನ್ನು ಪಡೆದುಕೊಂಡು ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂ ಕ್ರೀಡಾಂಗಣದಲ್ಲಿ ನಡೆಯುವ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಇವರ ಈ ಸಾಧನೆಯನ್ನು ಗುರುತಿಸಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಮುಸ್ಲಿಂ ಸೆಂಟ್ರಲ್ ಕಮಿಟಿ ವತಿಯಿಂದ ಗೌರವಿಸಿ ಸನ್ಮಾನಿಸಲಾಗಿದೆ.
ಈ ಸಂದರ್ಭದಲ್ಲಿ ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಹಾಜಿ ಕೆ ಎಸ್ ಮಹಮ್ಮದ್ ಮಸೂದ್, ಸಮಿತಿಯ ಮುಖಂಡರುಗಳಾದ ಮಾಜಿ ಮೇಯರ್ ಅಶ್ರಫ್, ಹಾಗೂ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.
ಅಬ್ದುಲ್ ಲತೀಫ್ ರವರು ಉತ್ತಮ ಕ್ರೀಡಾಪಟು ವಾಗಿದ್ದು ವಿವಿಧ ಸಂಘ-ಸಂಸ್ಥೆಗಳಲ್ಲಿ ಗುರುತಿಸಿಕೊಂಡು ಸಮಾಜ ಸೇವಾ ಕಾರ್ಯಕ್ರಗಳನ್ನು ಮಾಡುತ್ತಿರುತ್ತಾರೆ. ಇವರು ಮಾಡನೂರು ಗ್ರಾಮದ ಉಗ್ರಾಣಿ ಫಕೀರ್ ಸಾಹೇಬ್ ಹಾಗೂ ಖತೀಜ ಬಿ ದಂಪತಿಗಳ ಪುತ್ರರಾಗಿದ್ದಾರೆ. ಇವರು ತಮ್ಮ ಕ್ರೀಡಾ ಚಟುವಟಿಕೆಗಳ ಮೂಲಕ ಹಲವಾರು ರಾಷ್ಟ್ರೀಯ ಮಟ್ಟದ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.