ರಾಜ್ಯ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಾಂದರ್ಭಿಕ ಚಿತ್ರ

ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಜಿಲ್ಲೆಗಳಲ್ಲಿ ಮಳೆಯಾಗಲಿದೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲೂ ಮಳೆಯ ಸಾಧ್ಯತೆ ಇದೆ ಎನ್ನಲಾಗಿದೆ.



ಕರಾವಳಿ ಭಾಗದಲ್ಲಿ ತಾಪಮಾನ 2 ರಿಂದ 3 ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಬೆಳಗ್ಗೆ ಹಾಗೂ ಸಂಜೆಯ ಸಮಯದಲ್ಲಿ ಮೋಡ ಕವಿದ ವಾತಾವರಣವಿರಲಿದೆ.

Leave a Reply

Your email address will not be published. Required fields are marked *

error: Content is protected !!