ಕಾಂಗ್ರೆಸ್ ಗ್ಯಾರಂಟಿ ಕಾರ್ಡ್’ಗೆ ಜನರಿಂದ ಅಭೂತಪೂರ್ವ ಪ್ರತಿಕ್ರಿಯೆ- ದಿವ್ಯಪ್ರಭಾ ಗೌಡ
ಪುತ್ತೂರು: ಕಾಂಗ್ರೆಸ್ ಬೂತ್ ಸಂಖ್ಯೆ 193(ಸರ್ವೆ) ವತಿಯಿಂದ ಸೊರಕೆಯಲ್ಲಿ ಮನೆ-ಮನೆಗೆ ತೆರಳಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಿಸಲಾಯಿತು.
ಸರ್ವೆ ವಲಯ ಕಾಂಗ್ರೆಸ್ ಅಧ್ಯಕ್ಷ ಎಸ್.ಡಿ ವಸಂತರವರು ಗ್ಯಾರಂಟಿ ಕಾರ್ಡ್ ವಿತರಣೆಗೆ ಚಾಲನೆ ನೀಡಿದರು.
ಹಲವಾರು ಮನೆಗಳಿಗೆ ತೆರಳಿದ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಗ್ಯಾರಂಟಿ ಕಾರ್ಡ್ ವಿತರಿಸಿ ಕಾಂಗ್ರೆಸ್ ಘೋಷಿಸಿರುವ ಯೋಜನೆಗಳನ್ನು ಮನವರಿಕೆ ಮಾಡಿಕೊಟ್ಟು ಕಾಂಗ್ರೆಸ್‌ಗೆ ಮತ ನೀಡುವಂತೆ ವಿನಂತಿಸಿದರು.
ಈ ಸಂದರ್ಭದಲ್ಲಿ ದಿವ್ಯಪ್ರಭಾ ಗೌಡ ಮಾತನಾಡಿ ಬಿಜೆಪಿ ದುರಾಡಳಿತದಿಂದ ಜನತೆ ಬೇಸತ್ತಿದ್ದು ಬದಲಾವಣೆ ಬಯಸುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತೀ ಮನೆಗೂ 200 ಯುನಿಟ್ ಉಚಿತ ವಿದ್ಯುತ್, ಮನೆಯ ಯಜಮಾನಿಗೆ ತಿಂಗಳಿಗೆ ರೂ.2000 ಹಾಗೂ ತಿಂಗಳಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಘೋಷಿಸಿದ್ದು ಅದರ ಗ್ಯಾರಂಟಿ ಕಾರ್ಡ್ ನಾವು ವಿತರಿಸುತ್ತಿದ್ದೇವೆ ಎಂದು ಹೇಳಿದರು.
ಗ್ಯಾರಂಟಿ ಕಾರ್ಡ್ ಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಅವರು ಹೇಳಿದರು.
ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಸದಸ್ಯ ರಾಮಚಂದ್ರ ಸೊರಕೆ, ಬ್ಲಾಕ್ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷ ಸಿದ್ದೀಕ್ ಸುಲ್ತಾನ್ ಕೂಡುರಸ್ತೆ, ಮುಂಡೂರು ಗ್ರಾ.ಪಂ ಮಾಜಿ ಸದಸ್ಯೆ ಸೌಮ್ಯಾ ಆರ್ ಕಂಬಳಿ, ಬೂತ್ 193 ಸಮಿತಿ ಅಧ್ಯಕ್ಷ ಮಜೀದ್ ಬಾಳಾಯ, ಕಾಂಗ್ರೆಸ್ ಕಾರ್ಯಕರ್ತರಾದ ಸಂಜೀವ ನಾಯ್ಕ ಸೊರಕೆ, ಲಿಂಗಪ್ಪ ಸೊರಕೆ, ಧನಂಜಯ ಸೊರಕೆ ಉಪಸ್ಥಿತರಿದ್ದರು.