ವಿಟ್ಲ ಠಾಣಾ ಪೊಲೀಸರ ಕಾರ್ಯಾಚರಣೆ: ಮಾದಕ ದ್ರವ್ಯ ಸಾಗಾಟ ಮಾಡುತ್ತಿದ್ದ ಓರ್ವನ ಬಂಧನ, ಮತ್ತೋರ್ವ ಪರಾರಿ
ವಿಟ್ಲ: ಮಾದಕ ದ್ರವ್ಯ ಸಾಗಾಟ ಮಾಡುತ್ತಿದ್ದ ಓರ್ವನನ್ನು ವಿಟ್ಲ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದು, ಮತ್ತೋರ್ವ ಪರಾರಿಯಾಗಿರುವುದಾಗಿ ತಿಳಿದು ಬಂದಿದೆ.

ಬೆಳ್ತಂಗಡಿ ತಾಲೂಕು ಬಾರ್ಯ, ಸೂರ್ಯ ಪಡ್ಡಾಯಿ ನಿವಾಸಿ ಅಬ್ದುಲ್ ಅಜೀಜ್ (30) ಬಂಧಿತ ಆರೋಪಿ. ಮತ್ತೋರ್ವ ಆರೋಪಿ ವಿಟ್ಲ ಮೂಲದ ಬ್ಲೇಡ್ ಸಾದಿಕ್ ಪರಾರಿಯಾಗಿದ್ದಾನೆ.
ಆರೋಪಿಯಿಂದ 7.1 ಗ್ರಾಂ ಎಂಡಿಎಂಎ (14,200 ರೂ. ಮೌಲ್ಯದ) ಹಾಗೂ 11,000 ರೂ. ನಗದು, ಒಂದು ಮೊಬೈಲ್ ಫೋನ್ ಸ್ವಾಧಿನಪಡಿಸಿಕೊಳ್ಳಲಾಗಿದೆ. ಆರೋಪಿ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬ್ಲೇಡ್ ಸಾದಿಕ್ ಕಂಡಲ್ಲಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.





