ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳೂರಿಗೆ ಭೇಟಿ: ಫಲಾನುಭವಿಗಳ ಸಮ್ಮೇಳನಕ್ಕೆ ಚಾಲನೆ
ಮಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನವನ್ನು ಮಾ.16ರಂದು ಕರಾವಳಿ ಉತ್ಸವ ಮೈದಾನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.

ಸಚಿವರಾದ ಸುನಿಲ್ ಕುಮಾರ್, ಎಸ್. ಅಂಗಾರ, ಕೋಟ ಶ್ರೀನಿವಾಸ್ ಪೂಜಾರಿ, ಸೋಮಶೇಖರ್, ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಸಂಜೀವ ಮಠಂದೂರು, ಉಮನಾಥ್ ಕೋಟ್ಯಾನ್, ರಾಜೇಶ್ ನಾಯಕ್, ಹರೀಶ್ ಪೂಂಜಾ, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಸಹಿತ ಹಲವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.