ಪುತ್ತೂರು ನಗರಸಭಾ ಸದಸ್ಯ ಶಿವರಾಮ ಸಪಲ್ಯ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲ್ಮರ ಸಮೀಪದ ಉರಮಾಲಿನಲ್ಲಿರುವ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ನಗರಸಭೆಯ ಒಂದನೇ ವಾರ್ಡ್ ಸದಸ್ಯರಾಗಿದ್ದ ಅವರು ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದರು ಎನ್ನಲಾಗುತ್ತಿದೆಯಾದರೂ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.