ಪುತ್ತೂರು: ಜೆಡಿಎಸ್ ಪದಾಧಿಕಾರಿಗಳ, ಕಾರ್ಯಕರ್ತರ ಸಭೆ
ಪುತ್ತೂರು: ಜೆಡಿಎಸ್ ಪುತ್ತೂರು ವಿಧಾನಸಭಾ ಕ್ಷೆತ್ರದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆ ಪುತ್ತೂರು ಅಮರ್ ಕಾಂಪ್ಲೆಕ್ಸ್‌ನಲ್ಲಿರುವ ಪಕ್ಷದ ಕಚೇರಿಯಲ್ಲಿ ನಡೆಯಿತು.

ಸಭೆಯಲ್ಲಿ ಜೆಡಿಎಸ್ ರಾಜ್ಯ ರೈತ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಚೈತ್ರಾ ಗೌಡ ಮಾತನಾಡಿ ರಾಜ್ಯ ಬಿಜೆಪಿ ಸರಕಾರ ದುರಾಡಳಿತ ನಡೆಸುತ್ತಿದ್ದು ಭ್ರಷ್ಟಾಚಾರ ರಾಜ್ಯದಲ್ಲಿ ಮಿತಿ ಮೀರಿದೆ. ಜನರು ಬದಲಾವಣೆ ಬಯಸುತ್ತಿದ್ದು ಈ ಬಾರಿ ಜನತೆ ಜೆಡಿಎಸ್‌ಗೆ ಶಕ್ತಿ ನೀಡಲಿದ್ದಾರೆ ಎಂದು ಹೇಳಿದರು.

ಜೆಡಿಎಸ್ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಲಕ್ಷ್ಮಣ ಗೌಡ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಪ್ರದೀಪ್ ಗೌಡ, ಕಡಬ ತಾಲೂಕು ಜೆಡಿಎಸ್ ಅಧ್ಯಕ್ಷ ಸಯ್ಯದ್ ಮೀರಾ ಸಾಹೇಬ್
ಜೆಡಿಎಸ್ ರಾಜ್ಯ ಕಾರ್ಯದರ್ಶಿ ಇಬ್ರಾಹಿಂ ಗೋಳಿಕಟ್ಟೆ, ಜೆಡಿಎಸ್ ಪುತ್ತೂರು ವಿಧಾನಸಭಾ ಕ್ಷೆತ್ರ ಸಮಿತಿ ಅಧ್ಯಕ್ಷ ಅಶ್ರಫ್ ಕಲ್ಲೇಗ, ಮಂಗಳೂರು ಕ್ಷೇತ್ರ ಜೆಡಿಎಸ್ ಅಭ್ಯರ್ಥಿ ಸುಮತಿ ಹೆಗ್ಡೆ, ಪುತ್ತೂರು ಜೆಡಿಎಸ್ ಮಾಜಿ ಅಧ್ಯಕ್ಷರಾದ ಐ.ಸಿ ಕೈಲಾಸ್, ಜೆಡಿಎಸ್ ಪುತ್ತೂರು ಮಹಾ ಪ್ರ.ಕಾರ್ಯದರ್ಶಿ ಮಹಾವೀರ ಜೈನ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ಲಕೆದುವಡ್ಕ, ಜೆಡಿಎಸ್ ರಾಜ ಕಾರ್ಯದರ್ಶಿ ಇಕ್ಬಾಲ್ ಎಲಿಮಲೆ, ಜೆಡಿಎಸ್ ಪುತ್ತೂರು ಅಲ್ಪಸಂಖ್ಯಾತ ಘಟಕದ ಸಂಘಟನಾ ಕಾರ್ಯದರ್ಶಿ ಹಂಝ ರಾಮನಗರ,
ಪುತ್ತೂರು ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ಪದ್ಮಾ ಮಣಿಯನ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.