ಕಟ್ಟತ್ತಾರು: ಅಶೋಕ್ ರೈ ಭರವಸೆ ಬಳಿಕವೂ ತೆರವಾಗದ ಚುನಾವಣಾ ಬಹಿಷ್ಕಾರದ ಬ್ಯಾನರ್: ಇವರು ಈ ಬಾರಿ ಓಟೇ ಹಾಕುವುದಿಲ್ವಂತೆ..!
ಪುತ್ತೂರು: ಕಳೆದ 15 ವರ್ಷಗಳಿಂದ ರಸ್ತೆ ಕಾಂಕ್ರಿಟೀಕರಣಕ್ಕೆ ಮನವಿ ಮಾಡುತ್ತಿದ್ದರೂ ನಮ್ಮ ರಸ್ತೆಗೆ ಅನುದಾನ ಬಿಡುಗಡೆ ಮಾಡದೇ ಇರುವುದನ್ನು ಖಂಡಿಸಿ ಕೆದಂಬಾಡಿ ಗ್ರಾಮದ ಕಟ್ಟತ್ತಾರು-ನಿಡ್ಯಾಣ ನಿವಾಸಿಗಳು ಮತದಾನ ಬಹಿಷ್ಕಾರ ಮಾಡುವುದಾಗಿ ಬ್ಯಾನರ್ ಹಾಕಿದ್ದು ಆ ಪ್ರದೇಶಕ್ಕೆ ಕಾಂಗ್ರೆಸ್ ಮುಖಂಡ ಕೋಡಿಂಬಾಡಿ ಅಶೋಕ್ ರೈಯವರು ಮಾ.1ರಂದು ಸಂಜೆ ಭೇಟಿ ನೀಡಿ ಗ್ರಾಮಸ್ಥರ ಜೊತೆ ಮಾತುಕತೆ ನಡೆಸಿದ್ದರು.
ಆ ಸಂದರ್ಭದಲ್ಲಿ ಅಶೋಕ್ ರೈಯವರು ಸ್ಥಳೀಯರ ಅಹವಾಲು ಕೇಳಿದ ಬಳಿಕ ‘ಮುಂದಿನ ಬಾರಿ ನಮ್ಮನ್ನು ಬೆಂಬಲಿಸಿ, ಕಾಂಗ್ರೆಸ್ ಶಾಸಕರು ಆಯ್ಕೆಯಾದರೆ ಮೂರೇ ತಿಂಗಳೊಳಗೆ ನಿಮ್ಮ ರಸ್ತೆಯನ್ನು ಕಾಂಕ್ರೀಟ್ ಮಾಡಿಕೊಡುವ ಕೆಲಸವನ್ನು ಮಾಡುತ್ತೇವೆ. ಕಾಂಗ್ರೆಸ್‌ನಲ್ಲಿ ಯಾರೇ ಅಭ್ಯರ್ಥಿಯಾಗಿ ಶಾಸಕರಾದರೂ ನಾನೇ ಮುಂದೆ ನಿಂತು ನಿಮ್ಮ ಬೇಡಿಕೆಯನ್ನು ಈಡೇರಿಸುತ್ತೇನೆ. ಚುನಾವಣೆಯಲ್ಲಿ ಭಾಗವಹಿಸಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ ಎಂದು ಮನವಿ ಮಾಡಿದ್ದರು.
ಆದರೆ ಇದೀಗ ಅಶೋಕ್ ಕುಮಾರ್ ರೈ ಭೇಟಿ ನೀಡಿ ಭರವಸೆ ಕೊಟ್ಟು ಎರಡು ವಾರ ಕಳೆದರೂ ಕೂಡಾ ಬ್ಯಾನರ್ ಮಾತ್ರ ತೆರವಾಗಿಲ್ಲ. ಸ್ಥಳಕ್ಕೆ ಯಾವ ಅಧಿಕಾರಿಗಳೂ ಭೇಟಿ ನೀಡಿಲ್ಲ ಎಂದು ಸ್ಥಳೀಯರು ಅಸಮಾಧಾನ ತೋಡಿಕೊಂಡಿದ್ದಾರೆ