ವಿಟ್ಲ: ಭೀಕರ ವಾಹನ ಅಪಘಾತಕ್ಕೆ ಯುವಕ ಬಲಿ
ವಿಟ್ಲ: ಭೀಕರ ವಾಹನ ಅಪಘಾತಕ್ಕೆ ಯುವಕನೋರ್ವ ಬಲಿಯಾಗಿರುವ ಘಟನೆ ನಡೆದಿದೆ. ಬೋರ್ ವೆಲ್ ಲಾರಿ ಮತ್ತು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ವಿಟ್ಲದ ಕಾಶಿಮಠದಲ್ಲಿ ನಡೆದಿದೆ.

ಉಕ್ಕುಡ ಆಲಂಗಾರು ನಿವಾಸಿ ರಂಜಿತ್ ಮೃತಪಟ್ಟವರು.
ವಿಟ್ಲ ಕಡೆಯಿಂದ ಉಕ್ಕುಡ ಕಡೆಗೆ ತೆರಳುತ್ತಿದ್ದ ಬೈಕ್ ಗೆ ಎದುರಿನಿಂದ ಬಂದ ಬೋರ್ ವೆಲ್ ಲಾರಿ ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ. ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಸಹ ಸವಾರ ಅಪಾಯದಿಂದ ಪಾರಾಗಿದ್ದಾರೆ.





