ಕರಾವಳಿ

ಕಡಬ: ತಾಲೂಕು ಆಡಳಿತ ಸೌಧ, ತಾಲೂಕು ಪಂಚಾಯತ್ ಕಟ್ಟಡ, ಕೊಯಿಲ ಪಶು ವೈದ್ಯಕೀಯ ಕಾಲೇಜು ಕಟ್ಟಡ ಉದ್ಘಾಟಿಸಿದ ಸಚಿವ ಅಂಗಾರ



ಕಡಬ: ಹೊಸದಾಗಿ ನಿರ್ಮಾಣಗೊಂಡ ಕಡಬ ತಾಲೂಕು ಆಡಳಿತ ಸೌಧ, ಕಡಬ ತಾಲೂಕು ಪಂಚಾಯತ್ ಕಟ್ಟಡ ಹಾಗೂ ಜಿಲ್ಲೆಯಲ್ಲಿಯೇ ಪ್ರಥಮ ಎಂಬಂತೆ ಕೊಯಿಲ ಪಶು ವೈದ್ಯಕೀಯ ಕಾಲೇಜು ಕಟ್ಟಡಗಳ ಉದ್ಘಾಟನೆಯನ್ನು ಬಂದರು, ಒಳನಾಡು ಜಲಸಾರಿಗೆ ಹಾಗೂ ಮೀನುಗಾರಿಕಾ ಸಚಿವರಾದ ಎಸ್. ಅಂಗಾರರವರು ಮಾ.24 ರಂದು ನೆರವೇರಿಸಿದರು.



10 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ತಾಲೂಕು ಆಡಳಿತ ಸೌಧವನ್ನು ಉದ್ಘಾಟಿಸಿದ ಎಸ್ ಅಂಗಾರ ಅವರು ಬಳಿಕ 4.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕಡಬ ತಾಲೂಕು ಪಂಚಾಯತ್ ಕಟ್ಟಡ ಉದ್ಘಾಟಿಸಿದರು. ಕೊಯಿಲದಲ್ಲಿ 136 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಪಶು ವೈದ್ಯಕೀಯ ಮಹಾವಿದ್ಯಾಲಯದ ಮೊದಲನೇ ಹಂತದ ಕಟ್ಟಡವನ್ನು ವೀಡಿಯೋಗೆ ಚಾಲನೆ ನೀಡುವ ಮೂಲಕ ಉದ್ಘಾಟಿಸಿದರು.



ನಂತರ ಕಡಬ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸಭೆ ನಡೆಯಿತು. ಕಾರ್ಯಕ್ರಮದಲ್ಲಿ ಸಮಾರಂಭದಲ್ಲಿ ವಿವಿಧ ಇಲಾಖೆಗಳ ಸವಲತ್ತುಗಳನ್ನು ಫಲಾನುಭವಿಗಳಿಗೆ ವಿತರಿಸಲಾಯಿತು.

ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಪಶುವೈದ್ಯಕೀಯ ಕಾಲೇಜಿನ ಕಾರ್ಯ ಪಾಲಕ ಅಭಿಯಂತರರಾದ ದಾಮೋದರ್, ಬೀದರ್ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಕೆ.ಸಿ‌. ವೀರಣ್ಣ, ಬೀದರ್ ಪಶು ವೈದ್ಯಕೀಯ ಕಾಲೇಜಿನ ಡೀನ್ ಡಾ. ರಂಗನಾಥ್, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ. ತೀರ್ಥರಾಮ, ದ.ಕ.ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕುಮಾರ್, ಕರ್ನಾಟಕ ಗೃಹ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ವಿಜಯ್‌ ಕುಮಾರ್, ಎಚ್. ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ನವೀನ್‌ ಕುಮಾರ್ ಭಂಡಾರಿ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಭರತ್‌ ಬಿ.ಎಂ, ಕಡಬ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಪಕೀರ ಮೂಲ್ಯ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!