ಫ್ಯಾಸಿಸ್ಟ್ ನಡವಳಿಕೆಗೆ ಹೆದರುವ, ಪ್ರಶ್ನೆಯೇ ಇಲ್ಲ: ರಾಹುಲ್ ಗಾಂಧಿ ಅನರ್ಹತೆಗೆ ಸಿದ್ದರಾಮಯ್ಯ ಕಿಡಿ
ರಾಹುಲ್ ಗಾಂಧಿ ಅವರು ಹೇಳುವ ಸತ್ಯವನ್ನು ಎದುರಿಸಲಾಗದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ರಾಹುಲ್ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿದ್ದಾರೆ. ಭಾರತದ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಇದೊಂದು ಕರಾಳ ದಿನ ಎಂದು ರಾಜ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಭಾರತೀಯ ಜನತಾ ಪಕ್ಷದ ಪಾಪದ ಕೊಡ ತುಂಬಿದೆ. ತನ್ನ ನಾಶದ ಶವದ ಪೆಟ್ಟಿಗೆಗೆ ತಾನೇ ಕೊನೆಯ ಮೊಳೆ ಬಡಿದಿದೆ. ಈ ಫ್ಯಾಸಿಸ್ಟ್ ನಡವಳಿಕೆಗೆ ಹೆದರುವ, ಹಿಂಜರಿಯುವ ಪ್ರಶ್ನೆಯೇ ಇಲ್ಲ. ಈ ಅನ್ಯಾಯದ ವಿರುದ್ಧ ನ್ಯಾಯಾಲಯ ಮತ್ತು ಬೀದಿಗಳಲ್ಲಿ ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ.