ಎಸ್.ಡಿ.ಪಿ.ಐ ಕುರಿಯ ಬೂತ್ ಸಮಿತಿ ವತಿಯಿಂದ ರಂಝಾನ್ ಕಿಟ್ ವಿತರಣೆ: ಕುರಿಯದ ಎಸ್.ಡಿ.ಪಿ.ಐ ಯುವಕರ ಕಾರ್ಯ ಮಾದರಿ-ಇಬ್ರಾಹಿಂ ಸಾಗರ್
ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕುರಿಯ ಬೂತ್ ಸಮೀತಿ ವತಿಯಿಂದ ವರ್ಷಂಪ್ರತಿ ರಂಝಾನ್ ತಿಂಗಳಲ್ಲಿ ದಾನಿಗಳ ನೆರವಿನಿಂದ ಅರ್ಹ ಕುಟುಂಬಗಳಿಗೆ ರಂಝಾನ್ ಕಿಟ್ ಗಳನ್ನು ನೀಡುತ್ತಿದ್ದು ಈ ಬಾರಿ ಮಾ.24ರಂದು ಸುಮಾರು 120 ರಷ್ಟು ಆಹಾರ ಕಿಟ್ ಗಳನ್ನು ನೀಡಲಾಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ SDPI ಪುತ್ತೂರು ವಿಧಾನಸಭಾ ಅಧ್ಯಕ್ಷರಾದ ಹಾಜಿ ಇಬ್ರಾಹಿಂ ಸಾಗರ್, SDPI ಹಿರಿಯ ನಾಯಕರಾದ PBK ಮಹಮ್ಮದ್ ಹಾಗೂ ಆರ್ಯಾಪು ಚುನಾವಣಾ ಉಸ್ತುವಾರಿಯಾದ ಅಶ್ರಫ್ ಸಂಟ್ಯಾರ್ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಹಾಜಿ ಇಬ್ರಾಹಿಂ ಸಾಗರ್ ಮಾತನಾಡಿ ಕುರಿಯ SDPI ಯ ಯುವಕರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.ಇಂತಹ ಮಾದರಿ ಕಾರ್ಯಗಳು ಹಾಗೂ ಸಾಮಾಜಿಕ ಸೇವೆಗಳು ತಾಲೂಕಿನ ಪ್ರತಿಯೊಂದು ಕಡೆಗಳಲ್ಲಿ ಕೂಡ ನಡೆಯಬೇಕಿದ್ದು ಕುರಿಯದ ಎಸ್ಡಿಪಿಐ ಸದಸ್ಯರಿಗೆ ಹಾಗೂ ಕಿಟ್ ನೀಡಲು ಸಹಕಾರ ನೀಡಿದ ದಾನಿಗಳಿಗೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಎಸ್ಡಿಪಿಐ ಕಾರ್ಯಕರ್ತರಾದ ಅಶ್ರಫ್,ಝೈದ್, ಜಬ್ಬಾರ್ ಕುರಿಯ, ಜಬ್ಬಾರ್ ಅಜ್ಜಿಕಟ್ಟೆ, ಸಾದಿಕ್ ಕುರಿಯ, ಶಾಕಿರ್ ಮುಂಡೂರು,ನಿಝಾಂ ಪಂಜಳ, ಫಾರುಕ್ ಪಿ ಎಸ್,ರವೂಫ್ ಕುರಿಯ,ಪವಾಝ್ ಕುರಿಯ ಹಾಗೂ ಪಕ್ಷದ ಅಭಿಮಾನಿಗಳು ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು.