ಪುತ್ತೂರು ಕ್ಷೇತ್ರಕ್ಕೆ ಇನ್ನೂ ಅಂತಿಮವಾಗದ ಕಾಂಗ್ರೆಸ್ ಅಭ್ಯರ್ಥಿ
ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಾಗಿ ನಾಲ್ಕು ಮಂದಿ ರೇಸ್’ನಲ್ಲಿದ್ದು ಹೈಕಮಾಂಡ್ ಇನ್ನೂ ಯಾರಿಗೂ ಟಿಕೆಟ್ ಘೋಷಿಸಿಲ್ಲ.

ಪುತ್ತೂರು ಕ್ಷೇತ್ರಕ್ಕೆ ಅಶೋಕ್ ಕುಮಾರ್ ರೈ ಹೆಸರು ಮುಂಚೂಣಿಯಲ್ಲಿದ್ದು ಅವರ ಹೆಸರೇ ಫೈನಲ್ ಆಗಲಿದೆ ಎಂದು ಹೇಳಲಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ಟಿಕೆಟ್ ಗೆ ತೀವ್ರ ಲಾಬಿ ಆದ ಕಾರಣ ಪ್ರಥಮ ಪಟ್ಟಿಯಲ್ಲಿ ಪುತ್ತೂರು ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಿಸದೆ ದ.ಕ ಜಿಲ್ಲೆಯಲ್ಲಿ ಐದು ಕ್ಷೇತ್ರಗಳಿಗೆ ಮಾತ್ರ ಟಿಕೆಟ್ ಘೋಷಿಸಿತ್ತು.
ಇದೀಗ ಪುತ್ತೂರು ಕ್ಷೇತ್ರದ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಹಾಗೂ ರಾಜ್ಯ ಸಮಾಜ ಕಲ್ಯಾಣ ಮಂಡಳಿ ಮಾಜಿ ಅಧ್ಯಕ್ಷೆ ದಿವ್ಯಾಪ್ರಭಾ ಗೌಡರವರು ಟಿಕೆಟ್ ಆಕಾಂಕ್ಷಿಗಳಾಗಿ ರೇಸ್ ನಲ್ಲಿದ್ದಾರೆ. ಅಲ್ಲದೇ ಧನಂಜಯ ಅಡ್ಪಂಗಾಯ ಹಾಗೂ ಭರತ್ ಮುಂದೋಡಿ ಅವರೂ ಅವಕಾಶಕ್ಕಾಗಿ ಪ್ರಯತ್ನಿಸುತ್ತಿರುವುದಾಗಿ ತಿಳಿದು ಬಂದಿದೆ.
ಪುತ್ತೂರು ಕ್ಷೇತ್ರದ ಅಭ್ಯರ್ಥಿ ಯಾರೆನ್ನುವ ಕುತೂಹಲಕ್ಕೆ ಇನ್ನೆರಡು ದಿನದಲ್ಲಿ ಹೈಕಮಾಂಡ್ ತೆರೆ ಎಳೆಯಲಿದ್ದು ಅಭ್ಯರ್ಥಿಯನ್ನು ಘೋಷಣೆ ಮಾಡಲಿದೆ ಎಂದು ತಿಳಿದು ಬಂದಿದೆ.