ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಶಂಕೆ: ದಂಪತಿ ಸಜೀವ ದಹನ
ಮನೆಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ದಂಪತಿ ಸಜೀವ ದಹನವಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸೈದಾಪುರದಲ್ಲಿ ಮಾ.27ರಂದು ಮುಂಜಾನೆ ವರದಿಯಾಗಿದೆ.
ಕೆ.ಬಿ.ರಾಘವೇಂದ್ರ (39. ವ), ಶಿಲ್ಪಾ ರಾಘವೇಂದ್ರ (31. ವ) ಮೃತಪಟ್ಟವರು.
ಬಟ್ಟೆ ಅಂಗಡಿ ವ್ಯಾಪಾರಿಗಳಾಗಿದ್ದ ಇವರು
ಎಂದಿನಂತೆ ವ್ಯವಹಾರ ಮುಗಿಸಿಕೊಂಡು ಮನೆಯಲ್ಲಿ ಮಲಗಿದ್ದಾಗ ಮಾ.26ರಂದು ತಡರಾತ್ರಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಊಹಿಸಲಾಗಿದೆ.
ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ಬಟ್ಟೆಗಳು ಸುಟ್ಟು ಬೂದಿಯಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು, ಪೊಲೀಸರು ಭೇಟಿ ನೀಡಿದ್ದಾರೆ.