ದ್ವಿಚಕ್ರ ವಾಹನಗಳ ಮಧ್ಯೆ ಮುಖಾಮುಖಿ ಡಿಕ್ಕಿ:ಬಂಗೇರಕಟ್ಟೆಯ ಫಯಾಜ್ ಮೃತ್ಯು
ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿ ಸಂಭವಿಸಿ, ಓರ್ವ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಅಂಕರೋಡಿ ಬಳಿ ನಡೆದಿದೆ.
ಮೃತ ಯುವಕ ಬೆಳ್ತಂಗಡಿ ತಾಲೂಕಿನ ಬಂಗೇರಕಟ್ಟೆ ನಿವಾಸಿ ಫಯಾಜ್ ಎಂದು ತಿಳಿದು ಬಂದಿದೆ.

ಮಾ.27ರಂದು ಸಂಜೆ ಕಕ್ಯಪದವು LCR ಶಾಲೆಯ ಬಳಿ ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿದೆ. ಇನ್ನು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಬಂಗೇರಕಟ್ಟೆ ನಿವಾಸಿ ಫಯಾಜ್ ನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿಂದೂ ಭಾಂದವರು ಆಂಬುಲೆನ್ಸ್ ಮೂಲಕ ಗಾಯಾಳು ಫಯಾಜ್ ನನ್ನು ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.