ಸೌದಿ ಅರೇಬಿಯಾ: ಉಮ್ರಾ ಯಾತ್ರಾರ್ಥಿಗಳು ತೆರಳುತ್ತಿದ್ದ ಬಸ್ ಭೀಕರ ಅಪಘಾತ; ಭಾರತೀಯರು ಸೇರಿ 20 ಮಂದಿ ಮೃತ್ಯು, ಹಲವರ ಸ್ಥಿತಿ ಗಂಭೀರ
ಸೌದಿ ಅರೇಬಿಯಾದ ಮಕ್ಕಾದಲ್ಲಿ ಉಮ್ರಾ ಮಾಡಲು ತೆರಳುತ್ತಿದ್ದ ಬಸ್ ಪಲ್ಟಿಯಾಗಿ ಕನಿಷ್ಠ 20 ಜನರು ಸಾವನ್ನಪ್ಪಿದ್ದ ಘಟನೆ ಮಾರ್ಚ್ 27ರಂದು ನಡೆದಿದೆ.

ಅಸಿರ್ ಗವರ್ನರೇಟ್‌ನ ಅಕಾಬಾ ಶಾರ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ 20 ಮಂದಿ ಮೃತಪಟ್ಟು ಸುಮಾರು 29 ಜನರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.
ಗಾಯಗೊಂಡ ಪ್ರಯಾಣಿಕರನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಮೃತರು ಪವಿತ್ರ ಉಮ್ರಾ ಯಾತ್ರೆ ನಿರ್ವಹಿಸಲು ತೆರಳುತ್ತಿದ್ದ ವೇಳೆ ಬಸ್ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡು ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಬಸ್ ನಲ್ಲಿ ಭಾರತೀಯರು ಕೂಡ ಇದ್ದಾರೆ ಎನ್ನಲಾಗಿದ್ದು ಖಚಿತ ಮಾಹಿತಿ ಲಭ್ಯವಾಗಿಲ್ಲ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.